ನವದೆಹಲಿ : ಅಬಕಾರಿ ನೀತಿ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ಕಳೆದ ಸೋಮವಾರ ತಿಹಾರ್ ಜೈಲಿನಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ವಶಕ್ಕೆ ಪಡೆದುಕೊಂಡಿತ್ತು. ಇದೀಗ ಕೇಜ್ರಿವಾಲ್ ಬಂಧನ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ರೋಸ್ ಅವೆನ್ಯೂ ಕೋರ್ಟಿಗೆ ಸಿಎಂ ಕೇಜ್ರಿವಾಲ್ ಇದೀಗ ಆಗಮಿಸಿದ್ದಾರೆ.ಕೋರ್ಟ್ ಪ್ರಕ್ರಿಯೆ ಮುಗಿದ ಬಳಿಕ ಕೇಜ್ರಿವಾಲ್ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಇನ್ನೂ ನಿನ್ನೆ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರ ಹೇಳಿಕೆಯನ್ನು ಸಿಬಿಐ ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ. ಇಂದು ಸಂಬಂಧಪಟ್ಟ ವಿಚಾರಣಾ ನ್ಯಾಯಾಲಯದ ಮುಂದೆ ಅರವಿಂದ್ ಕೇಜ್ರಿವಾಲ್ ಅವರನ್ನು ಹಾಜರುಪಡಿಸಲು ಸಿಬಿಐ ಅನುಮತಿಯನ್ನು ಪಡೆದುಕೊಂಡಿದೆ.
ಹಾಗಾಗಿ ಇಂದು ಅರವಿಂದ್ ಕೇಜ್ರಿವಾಲ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಹಲಿಯ ರೋಸ್ ಅವೆನ್ಯೂ ಕೋರ್ಟ್ ನೀಡಿದ್ದ ಜಾಮೀನು ಆದೇಶವನ್ನು ಮಂಗಳವಾರ ದೆಹಲಿ ಹೈಕೋರ್ಟ್ ರದ್ದು ಮಾಡಿತ್ತು.