ಬೆಂಗಳೂರು: ಮೈಸೂರಿನ ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ಹರೀಶ್ ಗೌಡ ಅವರಿಗೆ ಹನಿಟ್ರ್ಯಾಪ್ ಮಾಡಿ, ಬ್ಲಾಕ್ ಮಾಡಿದ ಸಂಬಂಧ ಪೊಲೀಸರಿ ದೂರು ನೀಡಲಾಗಿತ್ತು. ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡ ಅವರಿಗೆ ಹನಿಟ್ರ್ಯಾಪ್ ಮಾಡಿದ ನಂತ್ರ, ಬ್ಲಾಕ್ ಮೇಲ್ ಮಾಡಲಾಗಿತ್ತು. ಈ ಸಂಬಂಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ಪೊಲೀಸರು ಮೈಸೂರು ಮೂಲದ ಸಂತೋಷ್ ಹಾಗೂ ಪುಟ್ಟರಾಜು ಎಂಬುವರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಬ್ಬರೂ ಪ್ರಭಾವಿಗಳನ್ನು ಸಂಪರ್ಕಿಸಿ, ಅವರನ್ನು ಹಿಂಬಾಲಿಸುತ್ತಿದ್ದರು. ಆ ಬಳಿಕ ಅವರ ಮೊಬೈಲ್ ನಂಬರ್ ಪಡೆದು, ಅವರು ಉಳಿದುಕೊಂಡಿದ್ದಂತ ಹೋಟೆಲ್ ನಲ್ಲೇ ಉಳಿದುಕೊಳ್ಳುತ್ತಿದ್ದರು. ಇದಾದ ನಂತ್ರ ವಿಐಪಿಗಳು ಖಾಲಿ ಮಾಡಿದ ರೂಂ ಬಾಡಿಗೆಗೆ ಪಡೆದು ಯುವತಿಯನ್ನು ಬಳಸಿಕೊಂಡು ಅದೇ ರೂಂನಲ್ಲಿ ಹಿಡನ್ ಕ್ಯಾಮರಾ ಬಳಸಿ, ವೀಡಿಯೋ ಚಿತ್ರೀಕರಿಸಿ, ಪ್ರಭಾವಿಗಳಿಗೆ ತಮ್ಮದೇ ವೀಡಿಯೋ ಎಂದು ಹಣಕ್ಕಾಗಿ ಪೀಡಿಸುತ್ತಿದ್ದಾಗೆ ತನಿಖೆಯ ವೇಳೆ ತಿಳಿದು ಬಂದಿದೆ.
ಪ್ರಜ್ವಲ್ ಅಶ್ಲೀಲ ವಿಡಿಯೋ ಹಂಚಿದ್ದು ಯಾರೆಂಬುದು ಮಾಹಿತಿ ಇದೆ : ಜಿ.ಪರಮೇಶ್ವರ್ ಸ್ಪೋಟಕ ಹೇಳಿಕೆ