ಶಿವಮೊಗ್ಗ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ) ಶಿವಮೊಗ್ಗ ಇಲ್ಲಿ 2024-25 ನೇ ಸಾಲಿನ ಡಿಪ್ಲೊಮಾ ಕೋರ್ಸ್ಗಳಲ್ಲಿ ಖಾಲಿ ಉಳಿದಿರುವ ಸೀಟುಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಡಿಪ್ಲೊಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್(ಡಿಟಿಡಿಎಂ), ಡಿಪ್ಲೊಮಾ ಇನ್ ಮೆಕಾಟ್ರಾನಿಕ್ಸ್(ಡಿಎಂಸಿಹೆಚ್), ಡಿಪ್ಲೊಮಾ ಇನ್ ಪ್ರಿಸಿಷನ್ ಮ್ಯಾನುಫ್ಯಾಕ್ಚರಿಂಗ್(ಡಿಪಿಎಂ) ಕೋರ್ಸ್ಗಳಲ್ಲಿ ಖಾಲಿ ಉಳಿದಿರುವ ಸೀಟುಗಳಿಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಮೊದಲು ಬಂದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ಮೇರೆಗೆ ಸೀಟುಗಳನ್ನು ಹಂಚಿಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ಸಿಎ-38, ನಿದಿಗೆ ಕೈಗಾರಿಕಾ ಪ್ರದೇಶ, ಮಾಚೇನಹಳ್ಳಿ ಶಿವಮೊಗ್ಗ 577 222 ದೂ.ಸಂ: 08182-269054, 9902232839, 9448307027, 9880141054, 9449286543 ನ್ನು ಸಂಪರ್ಕಿಸಬಹುದೆಂದು ಜಿಟಿಟಿಸಿ ಪ್ರಾಂಶುಪಾಲರು ತಿಳಿಸಿದ್ದಾರೆ.
ಜುಲೈ 2ನೇ ವಾರದಲ್ಲಿ ಬೆಂಗಳೂರಿನ ‘ಯಲಹಂಕದ ಅನಿಲ ವಿದ್ಯುತ್ ಘಟಕ’ ಲೋಕಾರ್ಪಣೆ: ಸಚಿವ ಕೆ.ಜೆ ಜಾರ್ಜ್
ವಿದ್ಯಾರ್ಥಿಗಳೇ ಗಮನಿಸಿ: ಜುಲೈ.13, 14ರಂದು ನಿಗದಿ ಪಡಿಸಿದ್ದ ‘PG CET-2024ರ ಪರೀಕ್ಷೆ’ ಮುಂದೂಡಿಕೆ