ಬೆಂಗಳೂರು: ಕಳವು ಮಾಲು ಸ್ವೀಕರಿಸಿದ ಆರೋಪದಡಿ ಅಟಿಕಾ ಗೋಲ್ಡ್ ಕಂಪನಿ ಮಾಲೀಕ ಬಾಬು ಅವರನ್ನು ತುಮಕೂರಿನ ತುರುವೇಕೆರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಈ ಸಂಬಂಧ ತುಮಕೂರು ಜಿಲ್ಲೆಯ ತುರುವೇಕೆರೆ ಠಾಣೆಯಲ್ಲಿ ಕಳವು ಮಾಲು ಸ್ವೀಕರಿಸಿದ ಆರೋಪದಡಿ ಅಟಿಕಾ ಬಾಬು ವಿರುದ್ಧ ಕೇಸ್ ದಾಖಲಾಗಿತ್ತು. ಇಂದು ಬೆಂಗಳೂರಿನ ನಿವಾಸದಲ್ಲಿ ತುರುವೇಕೆರೆ ಸಿಪಿಐ ಲೋಹಿತ್ ನೇತೃತ್ವದಲ್ಲಿ ಅಟ್ಟಿಕಾ ಬಾಬು ಅವರನ್ನು ಬಂಧಿಸಿದ್ದಾರೆ.
ಅಟಿಕಾ ಗೋಲ್ಡ್ ಕಂಪನಿಯ ಮಾಲೀಕ ಅಟ್ಟಿಗಾ ಬಾಬು ಅವರ ವಿರುದ್ಧ ಐಪಿಸಿ ಸೆಕ್ಷನ್ 454, 380, 411, 413ರಡಿ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಅಂದಹಾಗೇ ಅಟಿಕಾ ಗೋಲ್ಡ್ ಕಂಪನಿ ಮಾಲೀಕ ಬಾಬು ಬಂಧನ ಇದೇನು ಮೊದಲೇನಲ್ಲ. ಈ ಹಿಂದೆ ವಿವಿಧ ಪ್ರಕರಣಗಳಲ್ಲಿ ಅಟಿಕಾ ಬಾಬು ಅವರನ್ನು ಪೊಲೀಸರು ಬಂಧಿಸಿದ್ದರು. ಈಗ ಕಳವು ಮಾಲು ಸ್ವೀಕರಿಸಿದಂತ ಆರೋಪದಡಿ ಬಂಧಿಸಲಾಗಿದೆ.
ವಿದ್ಯಾರ್ಥಿಗಳೇ ಗಮನಿಸಿ: ಜುಲೈ.13, 14ರಂದು ನಿಗದಿ ಪಡಿಸಿದ್ದ ‘PG CET-2024ರ ಪರೀಕ್ಷೆ’ ಮುಂದೂಡಿಕೆ
ಜಮ್ಮು-ಕಾಶ್ಮೀರದ ದೋಡಾದಲ್ಲಿ ಭದ್ರತಾ ಪಡೆಗಳಿಂದ ಎನ್ಕೌಂಟರ್: ಮೂವರು ಉಗ್ರರ ಹತ್ಯೆ