ಬೆಂಗಳೂರು : ಪ್ರಸಕ್ತ ಸಾಲಿನಲ್ಲಿ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯಿದೆಯಡಿ ಖಾಸಗಿ ಅನುದಾನಿತ ಹಾಗೂ ಅನುದಾನ ರಹತಿ ಶಾಲೆಗಳಲ್ಲಿ ಉಚಿತ ಪ್ರವೇಶದ ಕುರಿತು ಶಿಕ್ಷಣ ಇಲಾಖೆ ಪೋಷಕರಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದೆ.
2024-25ನೇ ಶೈಕ್ಷಣಿಕ ಸಾಲಿನಲ್ಲಿ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ-2009ರ ಸೆಕ್ಷನ್ 12(1)(ಬಿ) ಹಾಗೂ 12(1)(ಸಿ) ಅಡಿಯಲ್ಲಿ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಉಚಿತ ಪ್ರವೇಶಕ್ಕಾಗಿ ಅರ್ಹ 9805 ಅರ್ಜಿಗಳನ್ನು ಎರಡನೇ ಸುತ್ತಿನ ಲಾಟರಿಗೆ ಪರಿಗಣಿಸಿದೆ.
ದಿನಾಂಕ:25.06.2024ರಂದು ಎರಡನೇ ಸುತ್ತಿನ ಲಾಟರಿಯನ್ನು ಆನ್ಲೈನ್ ಮೂಲಕ ನಡೆಸಲಾಗಿದೆ. ಈ ಎರಡನೇ ಸುತ್ತಿನ ಲಾಟರಿ ಪುಕ್ರಿಯೆಯಲ್ಲಿ 1846 ಅರ್ಹ ಮಕ್ಕಳನ್ನು ಶಾಲೆಗಳಿಗೆ ಹಂಚಿಕೆ ಮಾಡಲಾಗಿದೆ. ಆಯ್ಕೆಯಾದ ಮಕ್ಕಳ ಪೋಷಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಎಸ್.ಎಂ.ಎಸ್ ಮೂಲಕ ಸೀಟು ಹಂಚಿಕೆ ಮಾಹಿತಿಯನ್ನು ನೀಡಲಾಗಿದೆ. ಎಲ್ಲಾ ಪೋಷಕರು ದಿನಾಂಕ:26.06.2024 ರಿಂದ 02.07.2024 ರೊಳಗೆ ಸಂಬಂಧಪಟ್ಟ ಶಾಲೆಗಳಿಗೆ ಸೀಟು ಹಂಚಿಕೆ ಪತ್ರದೊಂದಿಗೆ ಭೇಟಿ ನೀಡಿ ದಾಖಲಾತಿ ಮಾಡಲು ತಿಳಿಸಿದೆ. ಸೀಟು ಹಂಚಿಕೆ ವಿವರ ಇಲಾಖಾ ವೆಬ್ಸೈಟ್ (www.schooleducation.karnataka.gov.in ಭೇಟಿ ನೀಡಬಹುದು.