ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ, ಮೂವರು ಡಿಸಿಎಂ ಹುದ್ದೆ ಕೂಗು ಎದ್ದಿರುವಂತ ಈ ಸಂದರ್ಭದಲ್ಲಿಯೇ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಒಂದೇ ವಿಮಾನದಲ್ಲಿ ಇಂದು ದೆಹಲಿಗೆ ತೆರಳಿದ್ದಾರೆ.
ಹೆಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಇಂದು ದೆಹಲಿಗೆ ತೆರಳಿದರು.
ಸಿಎಂ, ಡಿಸಿಎಂ ಅಲ್ಲದೇ ಗೃಹ ಸಚಿವ ಡಾ.ಜಿ ಪರಮೇಶ್ವರ್ ಕೂಡ ದೆಹಲಿಗೆ ತೆರಳಲಿದ್ದಾರೆ. ರಾಜ್ಯದ ಗೃಹ ಇಲಾಖೆಯ ಕೆಲವು ಪ್ರಾಜೆಕ್ಟ್ ಗಳಿಗೆ ಸಂಬಂಧಿಸಿದಂತೆ ಚರ್ಚಿಸೋದಕ್ಕೆ ತೆರಳುತ್ತಿರೋದಾಗಿ ಅವರು ತಿಳಿಸಿದ್ದಾರೆ.