ಬೆಂಗಳೂರು : ಹೆಚ್ಚುವರಿ ಡಿಸಿಎಂ ಸ್ಥಾನ ಹುದ್ದೆಯ ವಿಚಾರಕ್ಕೆ ಸಂಬಂಧಿಸಿದಂತೆ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದು ನಮ್ಮದು ಹೈಕಮಾಂಡ್ ಪಕ್ಷ. ಹಾಗಾಗಿ ಪಕ್ಷದಲ್ಲಿ ಯಾವುದೇ ಬದಲಾವಣೆ ತರಬೇಕಾದರೂ ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತದೆ ಅದಕ್ಕೆ ನಾವು ಭಜರಾಗಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.
ನಿನ್ನೆ ಬೆಂಗಳೂರಿನಲ್ಲಿ ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಚಂದ್ರಶೇಖರ ಶ್ರೀಗಳು ಡಿಸೆಂಬ ಡಿಕೆ ಶಿವಕುಮಾರ್ ಗೆ ಸಮ ಸ್ಥಾನ ಬಿಟ್ಟು ಕೊಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದರು. ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ,ಕಾಂಗ್ರೆಸ್ ಹೈಕಮಾಂಡ್ ಪಕ್ಷ. ಗೊತ್ತಾಯ್ತಾ. ಪ್ರಜಾಪ್ರಭುತ್ವದಲ್ಲಿ ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೋ ಆ ರೀತಿ ನಡೆದುಕೊಳ್ಳುತ್ತೇವೆ ಎಂದರು.
ರಾಮನಗರ ಜಿಲ್ಲೆಯ ಚನ್ನಪಟ್ಟಣ ಉಪಚುನಾವಣೆ ಇದೀಗ ಬಾರಿ ಕಾವೇರಿತ್ತಿದ್ದು, ಈ ಒಂದು ಕ್ಷೇತ್ರದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಹೆಗಡೆ ಅವರು ಸ್ಪರ್ಧಿಸಲಿದ್ದಾರೆ ಎಂದು ಸುದ್ದಿ ಹರಿದಾಡುತ್ತಿದೆ. ಈಗ ಈ ಒಂದು ವಿಚಾರಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸ್ಪಷ್ಟನೆ ನೀಡಿದ್ದಾರೆ.
‘ನಮ್ಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ನಾನು ಬಹಳ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. ಆದರೂ, ಈ ಬಗ್ಗೆ ಆಗಾಗ ಸೃಷ್ಟಿಯಾಗುವ ವದಂತಿಗಳಿಗೆ ಯಾರೂ ಕಿವಿಗೊಡಬಾರದು ಎಂದು ವಿನಂತಿಸುತ್ತಿದ್ದೇನೆ’ ಎಂದು ಅವರು ತಿಳಿಸಿದ್ದಾರೆ.