ಹಾವೇರಿ : ಬೆಳ್ಳಂ ಬೆಳಗ್ಗೆ ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ ಒಂದು ನಡೆದಿದ್ದು, ನಿಂತಿದ್ದ ಲಾರಿಗೆ ಟಿಟಿ ವಾಹನ ಒಂದು ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ 10ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಈ ಒಂದು ದುರ್ಘಟನೆ ಸಂಭವಿಸಿದೆ.
ಹೌದು ಸೌದತ್ತಿ ಯಲ್ಲಮ್ಮನ ದರ್ಶನ ಪಡೆದುಕೊಂಡು ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಬೆಳ್ಳಂ ಬೆಳಗ್ಗೆ ಭೀಕರ ರಸ್ತೆ ಅಪಘಾತದಲ್ಲಿ 10 ಜನ ಸವನ್ನಪಪ್ಪಿದೆ. ಟಿಟಿಯಲ್ಲಿ ಸುಮಾರು 15 ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಘಟನೆಯಲ್ಲಿ 10 ಕ್ಕೂ ಹೆಚ್ಚು ಜನರು ಸಾವನಪ್ಪಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರುವ ಸಾಧ್ಯತೆ ಇದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಮೃತ ದೇಹಗಳನ್ನು ಹೊರ ತೆಗೆಯಲು ಹರಸಾಹಸ ಪಡುತ್ತಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಂತವರನ್ನು ಹಾವೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾಸ್ಥಳಕ್ಕೆ ಬ್ಯಾಡಗಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.