ಮಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು ಮಂಗಳೂರು, ಮೈಸೂರು ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಿಜೆಪಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ಹಾಗೂ ಮೆರವಣಿಗೆ ನಡೆಸಿತು.
ಇತ್ತ ಮಂಗಳೂರಿನಲ್ಲಿ ಬಿಜೆಪಿ ಘಟನೆ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿ ಮುತ್ತಿಗೆ ಹಾಕಲು ಯತ್ನ ನಡೆಸಿದ ಘಟನೆ ನಡೆಯಿತು. ಮೆರವಣಿಗೆ ಮೂಲಕ ತೆರಳಿ ಡಿಸಿ ಕಚೇರಿಗೆ ತೆರಳಿ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದು, ಈ ವೇಳೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಮಧ್ಯದಲ್ಲೇ ತಡೆದಿದ್ದಾರೆ.ಈ ಸಂದರ್ಭದಲ್ಲಿ ಪೊಲೀಸರು ಪ್ರತಿಭಟನಾಕಾರರ ಮಧ್ಯೆ ನೂಕಾಟ ತಳ್ಳಾಟ ಆಗಿದೆ. ಪ್ರತಿಭಟನೆಯಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಶಾಸಕರಾದ ವೇದವ್ಯಾಸ ಕಾಮತ್, ಭಗಿರತಿ, ಸೇರಿದಂತೆ ಬಿಜೆಪಿ ಅನೇಕ ಕಾರ್ಯಕರ್ತರು ಭಾಗಿಯಾಗಿದ್ದರು.
ಅಲ್ಲದೆ ಮೈಸೂರು ಜಿಲ್ಲೆಯಲ್ಲಿ ಕೂಡ ಬಿಜೆಪಿಯಿಂದ ಪ್ರತಿಭಟನೆ ನಡೆಯುತ್ತಿದ್ದು ಬಿಜೆಪಿಯ ಎಸ್ ಟಿ ಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ವಾಲ್ಮೀಕಿ ನಿಗಮದಲ್ಲಿ ಹಗರಣ ಖಂಡಿಸಿ ಆಕ್ರೋಶ ವ್ಯಕ್ತವಾಗುತ್ತಿದ್ದು, ನಗರದ ಡೈರಿ ಸರ್ಕಲ್ ಇಂದ ಪ್ರತಿಭಟನಾ ಮೆರವಣಿಗೆ ನಡೆದಿದೆ. ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿಯವರೆಗೂ ಹೋಗಿ ಅಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುತ್ತಿಗೆ ಹಾಕುವ ಪ್ರಯತ್ನ ನಡೆದಿತ್ತು.ಆದರೆ ಪೊಲೀಸರು ಮಾರ್ಗ ಮಧ್ಯದಲ್ಲಿ ಪ್ರತಿಭಟನಾಕಾರರನ್ನು ತಡೆದಿದ್ದಾರೆ.