ಜಾರ್ಖಂಡ್ : ಭೂ ಹಗರಣ ಪ್ರಕರಣದಲ್ಲಿ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.
ಭೂ ಹಗರಣ ಪ್ರಕರಣದಲ್ಲಿ ಹೇಮಂತ್ ಸೋರೆನ್ ಅವರ ಜಾಮೀನು ಅರ್ಜಿಯ ವಿಚಾರಣೆ ಜೂನ್ 13 ರಂದು ಪೂರ್ಣಗೊಂಡಿತ್ತು . ಈ ಹಿನ್ನೆಲೆಯಲ್ಲಿ ಕೋರ್ಟ್ ಆದೇಶವನ್ನು ಕಾಯ್ದಿರಿಸಿತ್ತು. ನ್ಯಾಯಮೂರ್ತಿ ರಂಗನ್ ಮುಖೋಪಾಧ್ಯಾಯ ಅವರ ನ್ಯಾಯಾಲಯದಲ್ಲಿ ಕಳೆದ ವಿಚಾರಣೆಯ ಸಂದರ್ಭದಲ್ಲಿ, ಹೇಮಂತ್ ಸೊರೆನ್ ಅವರ ವಕೀಲರು ತಮ್ಮ ಕಕ್ಷಿದಾರನಿಗೆ ಜಾಮೀನು ನೀಡುವಂತೆ ಒತ್ತಾಯಿಸಿದ್ದರು.
ಆದರೆ, ಜಾರಿ ನಿರ್ದೇಶನಾಲಯದ (ಇಡಿ) ವಕೀಲರು ಇದನ್ನು ಬಲವಾಗಿ ವಿರೋಧಿಸಿದರು. ಎರಡೂ ಕಡೆಯ ವಾದವನ್ನು ಆಲಿಸಿದ ಜಾರ್ಖಂಡ್ ಹೈಕೋರ್ಟ್‌ನ ನ್ಯಾಯಮೂರ್ತಿ ರಂಗನ್ ಮುಖೋಪಾಧ್ಯಾಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.
Jharkhand High Court grants bail to former Jharkhand Chief Minister Hemant Soren, in the land scam case. pic.twitter.com/xA1b2mfXvn
— ANI (@ANI) June 28, 2024