ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ನಡೆದಿದ್ದು, ಕುಡಿದ ಮತ್ತಿನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಸ್ನೇಹಿತನನ್ನೇ ತಳ್ಳಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಬೆಂಗಳೂರಿನ ತಲಘಟ್ಟಪುರದ ಅಂಜನಾಪುರದಲ್ಲಿ ಈ ಘಟನೆ ನಡೆದಿದ್ದು, ನಿರ್ಮಾಣ ಹಂತದ ಕಟ್ಟಡದಿಂದ ತಳ್ಳಿ ವಿಶಾಲ್ ಯಾದವ್ ನನ್ನು ಉತ್ತರ ಪ್ರದೇಶ ಮೂಲದ ಅಭಿಷಕ್ ಎಂಬಾತ ತಳ್ಳಿ ಹತ್ಯೆ ಮಾಡಿದ್ದಾನೆ. ನಿನ್ನೆ ರಾತ್ರಿ ಇಬ್ಬರೂ ಕಟ್ಟದಲ್ಲಿ ಮದ್ಯ ಸೇವನೆ ಮಾಡಿದ್ದರು. ಈ ವೇಳೆ ಕುಡಿದ ಮತ್ತಿನಲ್ಲಿ ಇಬ್ಬರ ನಡುವೆ ಜಗಳವಾಗಿದೆ. ಗಲಾಟೆ ವೇಳೆ ಅಭಿಷೇಕ್ ವಿಶಾಲ್ ಯಾದವ್ ನನ್ನು ತಳ್ಳಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಸದ್ಯ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ತಲಘಟ್ಟಪುರ ಪೊಲೀಸ್ ಠಾನೆಯಲ್ಲಿ ಪ್ರಕರಣ ನಡೆದಿದೆ.