ರಾಯಚೂರು : ಯುವಕನೊಬ್ಬ ಅತ್ತಿಗೆಯ ತಂಗಿಯು ತನ್ನನ್ನು ಮದುವೆಯಾಗಲು ನಿರಾಕರಿಸಿದ್ದಾಳೆ ಎಂದು ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕನಸಾವಿಯಲ್ಲಿ ನಡೆದಿದೆ.
ಸಂತೋಷ್ (22) ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಯುವಕ. ಮನೆಯಲ್ಲಿನ ಫ್ಯಾನ್‌ಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಾನು ಆತ್ಮಹತ್ಯೆ ಮಾಡಿಕೊಳ್ಳೋಕೂ ಮುಂಚೆ ಆತ ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ನಾನೊಬ್ಬ ಹುಚ್ಚು ಪ್ರೇಮಿ ಎಂದು ಬರೆದುಕೊಂಡು ನಂತರ ಮನೆಯಲ್ಲಿ ಫ್ಯಾನಿಗೆ ನೇಣು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಸಂತೋಷ್ ತನ್ನ ಅಣ್ಣನ ಹೆಂಡತಿಯ ತಂಗಿ ಅಂದರೆ ಅತ್ತಿಗೆಯ ತಂಗಿಯನ್ನು ಬಹಳ ಇಷ್ಟಪಡುತ್ತಿದ್ದ.ಹಾಗಾಗಿ ಆಕೆಯನ್ನು ಮದುವೆಯಾಗುವ ಕುರಿತು ವಿಷಯ ಪ್ರಸ್ತಾಪಿಸಿದಾಗ, ಆಕೆ ಆತನನ್ನು ನಿರಾಕರಿಸಿದ್ದಾಳೆ. ಹಾಗಾಗಿ ಮನನೊಂದು ಸಂತೋಷ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.ಘಟನೆ ಕುರಿತಂತೆ ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.