Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹೋರ್ಮುಜ್ ಸಂಘರ್ಷದ ಬಿಸಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ದಿಢೀರ್ ಏರಿಕೆ; ಗ್ರಾಹಕರಿಗೆ ತಟ್ಟಲಿದೆ ಬೆಲೆ ಏರಿಕೆ ಶಾಕ್!

20/04/2026 9:05 AM

BREAKING : ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಕೂದಲೆಳೆ ಅಂತರದಲ್ಲಿ ಪಾರಾದ ಪ್ರಯಾಣಿಕರು

20/04/2026 8:53 AM
Sonia, Rahul Gandhi

ಸೋನಿಯಾ, ರಾಹುಲ್ ಗಾಂಧಿಗೆ ಮತ್ತೆ ಸಂಕಷ್ಟ? ಇಂದು ದೆಹಲಿ ಹೈಕೋರ್ಟ್ ನಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣದ ಮಹತ್ವದ ವಿಚಾರಣೆ

20/04/2026 8:49 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಂಡ್ಯದ ಮೈ ಶುಗರ್ ಸಕ್ಕರೆ ಕಾರ್ಖಾನೆಯ ವಿದ್ಯುತ್ ಬಿಲ್ ಮನ್ನಾ ಮಾಡಿ: ಸಿಎಂ, ಡಿಸಿಎಂಗೆ ದಿನೇಶ್ ಗೂಳಿಗೌಡ ಪತ್ರ
KARNATAKA

ಮಂಡ್ಯದ ಮೈ ಶುಗರ್ ಸಕ್ಕರೆ ಕಾರ್ಖಾನೆಯ ವಿದ್ಯುತ್ ಬಿಲ್ ಮನ್ನಾ ಮಾಡಿ: ಸಿಎಂ, ಡಿಸಿಎಂಗೆ ದಿನೇಶ್ ಗೂಳಿಗೌಡ ಪತ್ರ

By kannadanewsnow0929/06/2024 6:41 PM

ಮಂಡ್ಯ:  ಮಂಡ್ಯದ ಮೈ ಶುಗರ್ ಸಕ್ಕರೆ ಕಾರ್ಖಾನೆಯ ವಿದ್ಯುತ್ ಬಿಲ್ ಮನ್ನಾ ಮಾಡುವ ವಿಚಾರವನ್ನು ಸಚಿವ ಸಂಪುಟದ ಮುಂದೆ ಇಟ್ಟು ತುರ್ತು ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಇಂಧನ ಸಚಿವ ಕೆ.ಜೆ ಜಾರ್ಜ್, ಜಿಲ್ಲಾ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿಗೆ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಇಂದು ಪತ್ರ ಬರೆದಿರುವಂತ ಅವರು, ಮಂಡ್ಯದ ರೈತರ ಜೀವನಾಡಿಯಾಗಿರುವ ಮೈ ಶುಗರ್ ಫ್ಯಾಕ್ಟರಿಯು ರಾಜ್ಯದ ಏಕೈಕ ಸರ್ಕಾರಿ ಸ್ವಾಮ್ಯದ ಕಾರ್ಖಾನೆಯಾಗಿದೆ. ದೇಶದ ಮಾತ್ರವಲ್ಲ ಇಡೀ ಏಷ್ಯಾ ಖಂಡದಲ್ಲೇ ಮೊದಲು ಎಂದರೆ, 1932 ರಲ್ಲಿ ಈ ಕಾರ್ಖಾನೆಯು ಪ್ರಾರಂಭವಾಯಿತು. ಇದು ಮಂಡ್ಯ ಜಿಲ್ಲೆಯ ಹಾಗೂ ಕರ್ನಾಟಕದ ಹೆಮ್ಮೆಯಾಗಿದೆ. ಆದರೆ, ಇದೀಗ ಕಳೆದ 25 ವರ್ಷಗಳಿಂದ ವಿದ್ಯುತ್ ಬಿಲ್ ಕಟ್ಟದೆ ತೀವ್ರ ಸಂಕಷ್ಟಕ್ಕೆ ಗುರಿಯಾಗಿದೆ. ಇದರಿಂದ ಪಾರು ಮಾಡುವ ಗುರುತರ ಜವಾಬ್ದಾರಿ ಸರ್ಕಾರದ ಮೇಲಿದ್ದು, ಸಂಪುಟ ಸಭೆ ಕರೆದು ಬಾಕಿ ಇರುವ ವಿದ್ಯುತ್ ಬಿಲ್ 52.25 ಕೋಟಿ ರೂಪಾಯಿಯನ್ನು ಮನ್ನಾ ಮಾಡಬೇಕೆಂದು ಈ ಮೂಲಕ ಕೋರಿದ್ದಾರೆ.

ಹಲವು ವರ್ಷಗಳಿಂದ ಹಲವಾರು ಕಾರಣಗಳಿಂದಾಗಿ ಬಂದ್ ಆಗಿದ್ದ ಸಕ್ಕರೆ ಕಾರ್ಖಾನೆಯು ಕಳೆದ ವರ್ಷ ರಾಜ್ಯ ಕಾಂಗ್ರೆಸ್ ಸರ್ಕಾರದ ಮುತುವರ್ಜಿಯಿಂದ ಪುನರಾರಂಭಗೊಂಡಿತು. ರಾಜ್ಯ ಸರ್ಕಾರ ಕಾರ್ಖಾನೆ ಪ್ರಾರಂಭೋತ್ಸವ, ಹಾಗೂ ಗ್ಯಾಂಗ್ ಗಳಿಗೆ ನೀಡಲು 15 ಕೋಟಿ ರೂ. ದುಡಿಯುವ ಬಂಡವಾಳಕ್ಕಾಗಿ (ವರ್ಕಿಂಗ್ ಕ್ಯಾಪಿಟಲ್) 35 ಕೋಟಿ ರೂ.ಸೇರಿ ಒಟ್ಟಾರೆ 50 ಕೊಟಿ ರೂ.ಗಳನ್ನು ಕಾರ್ಖಾನೆಯ ಪುನಶ್ಚೇತನಕ್ಕೆ ನೀಡಲಾಗಿದೆ ಎಂದಿದ್ದಾರೆ.

ಪರಿಣಾಮ ಕಳೆದ ವರ್ಷ ಕಾರ್ಖಾನೆಯು ಮಂಡ್ಯದ ರೈತರು ಬೆಳೆದ 2 ಲಕ್ಷ 41 ಸಾವಿರ ಟನ್ ಕಬ್ಬನ್ನು ನುರಿಸಲಾಗಿತ್ತು. ರೈತರಿಗೆ ಕಬ್ಬಿನ ಹಣ ಪಾವತಿಯಾಗಿದೆ. ಕಾರ್ಖಾನೆಯಿಂದ ರೈತರಿಗೆ ತುಂಬಾ ಅನುಕೂಲವಾಗುತ್ತಿದೆ. ಈ ವರ್ಷ ಕನಿಷ್ಠ 2 ಲಕ್ಷ 5 ಸಾವಿರ ಟನ್ ಕಬ್ಬನ್ನು ನುರಿಸುವ ಸಂಬಂಧ ರೈತರು ಒಪ್ಪಂದವನ್ನು ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಆದರೆ, ಕಾರ್ಖಾನೆ ಕೆಲವು ಅನಿವಾರ್ಯ ಕಾರಣಗಳಿಂದ ಕಳೆದ 25 ವರ್ಷಗಳಿಂದ ವಿದ್ಯುತ್ ಬಿಲ್ ಕಟ್ಟಿಲ್ಲ. 52.25 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಇರುವ ಬಗ್ಗೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ ಕಾರ್ಖಾನೆಗೆ ನೋಟಿಸ್ ನೀಡಿದೆ. 7 ದಿನಗಳಲ್ಲಿ ವಿದ್ಯುತ್ ಪಾವತಿ ಮಾಡುವಂತೆ ಜೂನ್ 3 ರಂದೇ ನೀಡಿದ ನೋಟಿಸ್ ನಲ್ಲಿ ತಿಳಿಸಲಾಗಿದೆ. ಆದರೆ, ಕಾರ್ಖಾನೆಯ ಆರ್ಥಿಕ ಪರಿಸ್ಥಿತಿ ಸಮರ್ಪಕವಾಗಿಲ್ಲ. ಕೋಟ್ಯಂತರ ರೂಪಾಯಿ ನಷ್ಟದಲ್ಲಿದೆ. ಅಷ್ಟೊಂದು ಹಣವನ್ನು ವಿದ್ಯುತ್ ಬಿಲ್ ಗೆ ಪಾವತಿಸಿದರೆ, ಈ ಹಂಗಾಮಿನಲ್ಲಿ ಕಬ್ಬು ನುರಿಸುವುದೇ ಕಷ್ಟವಾಗಬಹುದು. ಇದರಿಂದ‌ ಈಗಾಗಲೇ ಕಾರ್ಖಾನೆ ನಂಬಿ ಕಬ್ಬು ಬೆಳೆದಿರುವ ರೈತರಿಗೆ ನಷ್ಟವಾಗಬಹುದು ಎಂದಿದ್ದಾರೆ.

ಈ ಹಿನ್ನೆಲೆಯಲ್ಲಿ ಕ್ಯಾಬಿನೆಟ್ ನಲ್ಲಿ ನಿರ್ಣಯ ಕೈಗೊಂಡು ವಿದ್ಯುತ್ ಬಿಲ್ ಮನ್ನಾ ಮಾಡಬೇಕು ಎಂದು ಮಂಡ್ಯದ ರೈತರ ಪರವಾಗಿ ಈ ಮೂಲಕ ಮನವಿ ಮಾಡಿದ್ದಾರೆ.

‘ಕೆ.ಸಿ ಜನರಲ್ ಆಸ್ಪತ್ರೆ’ಯನ್ನು ‘ಜನಪರ ಆಸ್ಪತ್ರೆ’ಯನ್ನಾಗಿಸಲು 200 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ: ದಿನೇಶ್ ಗುಂಡೂರಾವ್

BIG NEWS: ‘ಶಿಕ್ಷಣ ಸಚಿವ’ರ ಕ್ಷೇತ್ರದಲ್ಲೇ ಲಂಚಾವತಾರ: ‘ಪೋನ್ ಪೇ’ ಮೂಲಕವೇ ‘SDA ಲಂಚ ಸ್ವೀಕಾರ’

Share. Facebook Twitter LinkedIn WhatsApp Email

Related Posts

BREAKING : ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಕೂದಲೆಳೆ ಅಂತರದಲ್ಲಿ ಪಾರಾದ ಪ್ರಯಾಣಿಕರು

20/04/2026 8:53 AM1 Min Read

ಕರ್ನಾಟಕ ನಿವಾಸ ಪ್ರಮಾಣಪತ್ರ ಪಡೆಯುವುದು ಹೇಗೆ? : ಬೇಕಾಗುವ ದಾಖಲೆಗಳು, ಶುಲ್ಕದ ವಿವರ ಇಲ್ಲಿದೆ

20/04/2026 8:45 AM2 Mins Read

ನಿಮ್ಮ ಮನೆಯಲ್ಲಿರುವ `ಫ್ಯಾನ್ ವೇಗ’ ಕಡಿಮೆಯಾಗಿದೆಯೇ? ಸ್ಪೀಡ್ ಹೆಚ್ಚಿಸಲು ಜಸ್ಟ್ ಹೀಗೆ ಮಾಡಿ.!

20/04/2026 8:18 AM2 Mins Read
Recent News

ಹೋರ್ಮುಜ್ ಸಂಘರ್ಷದ ಬಿಸಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ದಿಢೀರ್ ಏರಿಕೆ; ಗ್ರಾಹಕರಿಗೆ ತಟ್ಟಲಿದೆ ಬೆಲೆ ಏರಿಕೆ ಶಾಕ್!

20/04/2026 9:05 AM

BREAKING : ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಕೂದಲೆಳೆ ಅಂತರದಲ್ಲಿ ಪಾರಾದ ಪ್ರಯಾಣಿಕರು

20/04/2026 8:53 AM
Sonia, Rahul Gandhi

ಸೋನಿಯಾ, ರಾಹುಲ್ ಗಾಂಧಿಗೆ ಮತ್ತೆ ಸಂಕಷ್ಟ? ಇಂದು ದೆಹಲಿ ಹೈಕೋರ್ಟ್ ನಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣದ ಮಹತ್ವದ ವಿಚಾರಣೆ

20/04/2026 8:49 AM

ಕರ್ನಾಟಕ ನಿವಾಸ ಪ್ರಮಾಣಪತ್ರ ಪಡೆಯುವುದು ಹೇಗೆ? : ಬೇಕಾಗುವ ದಾಖಲೆಗಳು, ಶುಲ್ಕದ ವಿವರ ಇಲ್ಲಿದೆ

20/04/2026 8:45 AM
State News
KARNATAKA

BREAKING : ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: ಕೂದಲೆಳೆ ಅಂತರದಲ್ಲಿ ಪಾರಾದ ಪ್ರಯಾಣಿಕರು

By kannadanewsnow5720/04/2026 8:53 AM KARNATAKA 1 Min Read

ಮಂಡ್ಯ: ಮೈಸೂರು-ಬೆಂಗಳೂರು ದಶಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮಂಡ್ಯ ತಾಲೂಕಿನ…

ಕರ್ನಾಟಕ ನಿವಾಸ ಪ್ರಮಾಣಪತ್ರ ಪಡೆಯುವುದು ಹೇಗೆ? : ಬೇಕಾಗುವ ದಾಖಲೆಗಳು, ಶುಲ್ಕದ ವಿವರ ಇಲ್ಲಿದೆ

20/04/2026 8:45 AM

ನಿಮ್ಮ ಮನೆಯಲ್ಲಿರುವ `ಫ್ಯಾನ್ ವೇಗ’ ಕಡಿಮೆಯಾಗಿದೆಯೇ? ಸ್ಪೀಡ್ ಹೆಚ್ಚಿಸಲು ಜಸ್ಟ್ ಹೀಗೆ ಮಾಡಿ.!

20/04/2026 8:18 AM

Aadhaar Card Alert: 10 ವರ್ಷ ಹಳೆಯ ಆಧಾರ್ ಕಾರ್ಡ್ ಹೊಂದಿರುವವರೇ ಜೂನ್ 14 ರೊಳಗೆ ತಪ್ಪದೇ ಈ ಕೆಲಸ ಮಾಡಿ.!

20/04/2026 8:12 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.