ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಬೆಟ್ಟದ ಸಮೀಪ ಅನುಮಾನಸ್ಪದವಾಗಿ ಓಡಾಡುತ್ತಿದ್ದು, ಅಕ್ರಮವಾಗಿ ಗಾಂಜಾ ಸಾಗಾಟ ಮಾರಾಟ ಮಾಡಲು ಪ್ಲಾನ್ ಮಾಡಿದ್ದ 4 ಆರೋಪಿಗಳನ್ನು ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಮೈಸೂರು ಮೂಲದ ಪ್ರದೀಪ್( 23) ಪ್ರೀತಮ್ (26) ಶ್ರೇಯಸ್(24) ಅಭಿಷೇಕ್( 25 ) ಎಂದು ಗುರುತಿಸಲಾಗಿದೆ. ಬಂಧಿತರು ಬೈಕ್ ನಲ್ಲಿ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ಬೆಟ್ಟದ ಪಾಲಾರ್ ರಸ್ತೆಯಲ್ಲಿ ಅನುಮಾನಸ್ಪಾದವಾಗಿ ಓಡಾಡುತ್ತಿದ್ದರು ಎನ್ನಲಾಗಿದೆ.
ಈ ಬಗ್ಗೆ ವಿಷಯ ತಿಳಿದ ಮಹದೇಶ್ವರಬೆಟ್ಟ ಪೋಲಿಸ್ ಠಾಣೆಯ ಪೊಲೀಸರ ತಂಡವು ಸ್ಥಳಕ್ಕೆ ಆಗಮಿಸಿ ಪರೀಶೀಲಿಸಿದಾಗ ಗಾಂಜಾ ಇರುವುದು ಪತ್ತೆಯಾಗಿದೆ. ಕೂಡಲೇ ನಾಲ್ವರನ್ನು ಬಂಧಿಸಿ ಸುಮಾರು 190 ಗ್ರಾಂ ಒಣ ಗಾಂಜಾವನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬಂಧ ಮಹದೇಶ್ವರಬೆಟ್ಟ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.