ಹುಬ್ಬಳ್ಳಿ : ಸದ್ಯ ರಾಜ್ಯ ರಾಜಕಾರಣದಲ್ಲಿ ಸಿಎಂ ಹಾಗೂ ಡಿಸಿಎಂ ಬಗ್ಗೆ ಚರ್ಚೆ ನಡೆಯುತ್ತಿದ್ದು ಇದರ ಮಧ್ಯ, ಈ ವಿಷಯವಾಗಿ ಸಂಸದ ಜಗದೀಶ್ ಶೆಟ್ಟರ್ ಅವರು ಮಾತನಾಡಿದ್ದು, ಕಾಂಗ್ರೆಸ್ ಶಾಸಕರಲ್ಲಿಯೇ ಸರ್ಕಾರದ ಬಗ್ಗೆಅಸಮಾಧಾನವಿದೆ ಹಾಗಾಗಿ ಕಾಂಗ್ರೆಸ್ ಶಾಸಕರಿಂದಲೇ ಯಾವುದೇ ಕ್ಷಣದಲ್ಲಾದರೂ ಸರ್ಕಾರ ಪತನ ವಾಗಬಹುದು ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಹೌದು ಸಿಎಂ ಡಿಸಿಎಂ ವಿಷಯದ ಕುರಿತು ಚರ್ಚೆ ನಡೆಯುತ್ತಿರುವ ಪ್ರಶ್ನೆಗಳಿಗೆ ಇಂದು ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು,ಸಿದ್ದರಾಮಯ್ಯ ಅವರು ಸಿಎಂ ಆದಾಗಿನಿಂದಲೂ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಯಾಗುತ್ತಿದೆ. ಕಾಂಗ್ರೆಸ್ ಶಾಸಕರಲ್ಲೇ ಸರ್ಕಾರದ ಬಗ್ಗೆ ಅಸಮಾಧಾನವಿದೆ.ಯಾವುದೇ ಸಮಯದಲ್ಲಿ ಏನು ಬೇಕಾದರೂ ಆಗಬಹುದು ಎಂದು ಹೇಳಿದರು.
ಸರ್ಕಾರದ ವಿರುದ್ಧ ಶಾಸಕರೇ ಅಸಮಾಧಾನ ತೋಡಿಕೊಳ್ಳುತ್ತಿದ್ದಾರೆ. ಅದು ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರದಲ್ಲಿ ಒಳಬೇಗುದಿ ಹೆಚ್ಚಾಗುತ್ತಿದೆ. ಯಾವುದೇ ಸಮಯದಲ್ಲಿ ಏನು ಬೇಕಾದರೂ ಆಗಬಹುದು. ಸರ್ಕಾರ ಪತನವೂ ಆಗಬಹುದು. ಅದು ಕಾಂಗ್ರೆಸ್ ಪಕ್ಷದ ಶಾಸಕರಿಂದಲೇ ರಾಜ್ಯ ಸರ್ಕಾರ ಪತನವಾಗುತ್ತೆ. ಆದರೆ ಯಾವಾಗ ಅನ್ನೋದು ಹೇಳಲು ಬರೋದಿಲ್ಲ ಎಂದರು.