ಮಂಡ್ಯ: ಸಿಎಂ ಬದಲಾವಣೆಯಾಗಲಿ, ಹೆಚ್ಚುವರಿ ಡಿಸಿಎಂ ವಿಚಾರದಲ್ಲಾಗಲೀ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ. ಅದನ್ನು ನಾವ್ಯಾರೂ ಮೀರುವುದಿಲ್ಲ ಎಂದು ಸಚಿವರಾದ ಜಮೀರ್ ಅಹಮದ್ ಖಾನ್ ಮತ್ತು ಚಲುವರಾಯಸ್ವಾಮಿ ಹೇಳಿದ್ದಾರೆ.
ಅವರು ಭಾನುವಾರ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆಯ ವಿಚಾರವಾಗಿ ಮಾಧ್ಯಮಗಳ ಜೊತೆಗೆ ಮಾತನಾಡಿದರು, ಇದೇ ವೇಳೆ ಅವರು ಮಾತನಾಡುತ್ತ, ದ್ಯಕ್ಕೆ ಸಿಎಂ ಸ್ಥಾನ ಖಾಲಿ ಇಲ್ಲ. ಈಗ ಸಿದ್ದರಾಮಯ್ಯ ಸಿಎಂ. ಹೀಗಾಗಿ, ಸಿಎಂ ಖುರ್ಚಿ ಖಾಲಿ ಎಲ್ಲಿದೆ? ಖಾಲಿ ಇರುವಾಗ ಚರ್ಚೆ ಮಾಡಬೇಕು. ಖಾಲಿ ಇಲ್ಲದಿರುವಾಗ ಚರ್ಚೆ ಅಗತ್ಯವಿಲ್ಲ. ಈ ಬಗ್ಗೆ ಸ್ವಾಮೀಜಿಯ ಅಭಿಪ್ರಾಯ ವೈಯಕ್ತಿಕ. ಅವರ ಅಭಿಪ್ರಾಯ ತಪ್ಪು ಅನ್ನೋಕೆ ಆಗಲ್ಲ. ಈಗಾಗಲೇ ಹೈಕಮಾಂಡ್ ಸಿದ್ದರಾಮಯ್ಯ ಸಿಎಂ ಎಂದು ತೀರ್ಮಾನಿಸಿ ಆಗಿದೆ ಅಂಥ ತಿಳಿಸಿದರು.