Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ನಾಳೆಯಿಂದ ‘SSLC’ ಪರೀಕ್ಷೆ ಆರಂಭ : ವಿದ್ಯಾರ್ಥಿಗಳಿಗೆ ‘ಆಲ್ ದಿ ಬೆಸ್ಟ್’ ಹೇಳಿದ ಸಿಎಂ ಸಿದ್ದರಾಮಯ್ಯ

17/03/2026 2:05 PM

ದತ್ತು ಪಡೆದ ತಾಯಂದಿರಿಗೂ 12 ವಾರಗಳ ‘ಹೆರಿಗೆ ರಜೆ’ ಕಡ್ಡಾಯ: ಸುಪ್ರೀಂ ಕೋರ್ಟ್

17/03/2026 1:54 PM

ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟಗಾರರಿಗೆ ಶಾಕ್: ಮಾದಕ ವಸ್ತು ನಿಯಂತ್ರಣ ಕಾಯ್ದೆಯಡಿ ಸೇರಿಸಲು ಸರ್ಕಾರ ಚಿಂತನೆ

17/03/2026 1:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರವಾಸಿ ಮಾರ್ಗದರ್ಶಿ ಹುದ್ದೆಗೆ ಅರ್ಜಿ ಆಹ್ವಾನ
KARNATAKA

ಪ್ರವಾಸಿ ಮಾರ್ಗದರ್ಶಿ ಹುದ್ದೆಗೆ ಅರ್ಜಿ ಆಹ್ವಾನ

By kannadanewsnow0702/07/2024 11:06 AM

ಮಡಿಕೇರಿ: ಪ್ರವಾಸೋದ್ಯಮವನ್ನು ಅಭಿವೃದ್ಧಿ ಹಾಗೂ ಪ್ರಚಾರ ಪಡಿಸುವ ಉದ್ದೇಶದಿಂದ ಜಿಲ್ಲೆಯ ಪ್ರವಾಸಿ ತಾಣಗಳ ಐತಿಹಾಸಿಕ, ಧಾರ್ಮಿಕ, ಸಾಹಿತ್ಯಕ, ಸಾಂಸ್ಕøತಿಕ ಹಾಗೂ ಕಲಾವೈವಿಧ್ಯತೆಗಳನ್ನು ಒಳಗೊಂಡ ಸೃಜನಶೀಲತೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ದೇಶ/ ವಿದೇಶಿ ಪ್ರವಾಸಿಗರಿಗೆ ನೀಡಲು ಅಂದರೆ ‘ಒಂದು ರಾಜ್ಯ-ಹಲವು ವಿಸ್ಮಯಗಳು’ ಎಂಬುದನ್ನು ಪರಿಚಯಿಸವುದರ ಮೂಲಕ ನಾಡಿನ ಸಮಗ್ರತೆಯ ಬಗ್ಗೆ ವಿವಿಧ ಆಯಾಮಗಳ ಮೂಲಕ ಪ್ರವಾಸಿಗರನ್ನು ನಾಡಿಗೆ ಸೆಳೆಯಲು ಸ್ಥಳೀಯ ಪ್ರವಾಸಿ ಸಂಪನ್ಮೂಲಗಳ ಬಗ್ಗೆ ಜ್ಞಾನ ಮತ್ತು ಅನುಭವವಿರುವ ಪ್ರವಾಸಿ ಮಾರ್ಗದರ್ಶಿಗಳು ಅವಶ್ಯವಾಗಿ ಬೇಕಾಗಿರುವುದರಿಂದ ಜಿಲ್ಲಾ ಪ್ರವಾಸಿ ಮಾರ್ಗದರ್ಶಿಯಾಗಿ ಕಾರ್ಯನಿರ್ವಹಿಸಲು ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ 21 ರಿಂದ 45 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳಿಂದ ಹಾಗೂ ರಾಜ್ಯ ಪ್ರವಾಸಿ ಮಾರ್ಗದರ್ಶಿಯಾಗಿ ಕಾರ್ಯನಿರ್ವಹಿಸಲು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾದ 21 ರಿಂದ 45 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯೊಂದಿಗೆ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿಯ ಪ್ರತಿ, ಪದವಿ ಪೂರ್ವ ಶಿಕ್ಷಣದ ಅಂಕಪಟ್ಟಿಯ ಪ್ರತಿ, ಪದವಿ ಅಂಕಪಟ್ಟಿಯ ಪ್ರತಿ, ಜಾತಿ ಪ್ರಮಾಣ ಪತ್ರದ ಪ್ರತಿ (ತಹಶೀಲ್ದಾರ್/ಉಪ ತಹಶೀಲ್ದಾರ್ ಇವರಿಂದ ಪಡೆದಿರಬೇಕು), ಚಾಲ್ತಿಯಲ್ಲಿರುವ ಆದಾಯ ಪ್ರಮಾಣ ಪತ್ರದ ಪ್ರತಿ (ತಹಶೀಲ್ದಾರ್/ಉಪ ತಹಶೀಲ್ದಾರ್ ಇವರಿಂದ ಪಡೆದಿರಬೇಕು), ವಾಸಸ್ಥಳ ದೃಡೀಕರಣ ಪತ್ರದ ಪ್ರತಿ (ತಹಶೀಲ್ದಾರ್/ಉಪ ತಹಶೀಲ್ದಾರ್ ಇವರಿಂದ ಪಡೆದಿರಬೇಕು), ನಿರುದ್ಯೋಗಿ ಪ್ರಮಾಣ ಪತ್ರದ ಪ್ರತಿ (ತಹಶೀಲ್ದಾರ್/ಉಪ ತಹಶೀಲ್ದಾರ್ ಇವರಿಂದ ಪಡೆದಿರಬೇಕು), ಆಧಾರ್ ಕಾರ್ಡ್ ಪ್ರತಿ, ಪಾನ್ ಕಾರ್ಡ್ ಪ್ರತಿ, ಚುನಾವಣಾ ಗುರುತಿನ ಚೀಟಿ ಪ್ರತಿ, ಬ್ಯಾಂಕ್ ಖಾತೆಯ ಪಾಸ್ ಪುಸ್ತಕದ ಪ್ರತಿ ಈ ದಾಖಲಾತಿಗಳನ್ನು ಸಲ್ಲಿಸಬೇಕು.

ಕೊಡಗು ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಲ್ಲಿ ಪ್ರವಾಸಿ ಮಾರ್ಗದರ್ಶಿಯಾಗಿ ಕಾರ್ಯನಿರ್ವಹಿಸಲು ಆಸಕ್ತಿಯುಳ್ಳ ಅಭ್ಯರ್ಥಿಗಳು ನಿಗಧಿತ ಅರ್ಜಿ ನಮೂನೆಗಳನ್ನು ಉಪ ನಿದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟೀವರ್ಟ್ ಹಿಲ್ ರಸ್ತೆ, ಮಡಿಕೇರಿ, ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಜುಲೈ, 31 ರ ಸಂಜೆ 5 ಗಂಟೆಯೊಳಗೆ ಸಲ್ಲಿಸಲು ತಿಳಿಸಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಇಲಾಖೆಯಿಂದ ತರಬೇತಿ ನೀಡಲಾಗುವುದು ಹಾಗೂ ತರಬೇತಿಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಮಾರ್ಗದರ್ಶಿ ಗೈಡ್‍ಲೈಸೆನ್ಸ್ ನೀಡಲಾಗುವುದು.ಹೆಚ್ಚಿನ ವಿವರಗಳಿಗೆ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ 571201 ದೂ.ಸಂ. 08272-200519 ಅಥವಾ ಇ-ಮೇಲ್ ddkodagutourism@gmail.com ಗೆ ಸಂಪರ್ಕಿಸುವಂತೆ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್ ಅವರು ತಿಳಿಸಿದ್ದಾರೆ.

Applications invited for the post of Tourist Guide
Share. Facebook Twitter LinkedIn WhatsApp Email

Related Posts

BIG NEWS : ನಾಳೆಯಿಂದ ‘SSLC’ ಪರೀಕ್ಷೆ ಆರಂಭ : ವಿದ್ಯಾರ್ಥಿಗಳಿಗೆ ‘ಆಲ್ ದಿ ಬೆಸ್ಟ್’ ಹೇಳಿದ ಸಿಎಂ ಸಿದ್ದರಾಮಯ್ಯ

17/03/2026 2:05 PM1 Min Read

ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟಗಾರರಿಗೆ ಶಾಕ್: ಮಾದಕ ವಸ್ತು ನಿಯಂತ್ರಣ ಕಾಯ್ದೆಯಡಿ ಸೇರಿಸಲು ಸರ್ಕಾರ ಚಿಂತನೆ

17/03/2026 1:49 PM2 Mins Read

ರಾಯಚೂರು ಜಿಲ್ಲೆಯಲ್ಲಿ ಹೊಸ KSRP ಪಡೆ ಸ್ಥಾಪನೆ ಬಗ್ಗೆ ಪರಿಶೀಲನೆ: ಗೃಹ ಸಚಿವ ಡಾ: ಜಿ.ಪರಮೇಶ್ವರ್

17/03/2026 1:44 PM1 Min Read
Recent News

BIG NEWS : ನಾಳೆಯಿಂದ ‘SSLC’ ಪರೀಕ್ಷೆ ಆರಂಭ : ವಿದ್ಯಾರ್ಥಿಗಳಿಗೆ ‘ಆಲ್ ದಿ ಬೆಸ್ಟ್’ ಹೇಳಿದ ಸಿಎಂ ಸಿದ್ದರಾಮಯ್ಯ

17/03/2026 2:05 PM

ದತ್ತು ಪಡೆದ ತಾಯಂದಿರಿಗೂ 12 ವಾರಗಳ ‘ಹೆರಿಗೆ ರಜೆ’ ಕಡ್ಡಾಯ: ಸುಪ್ರೀಂ ಕೋರ್ಟ್

17/03/2026 1:54 PM

ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟಗಾರರಿಗೆ ಶಾಕ್: ಮಾದಕ ವಸ್ತು ನಿಯಂತ್ರಣ ಕಾಯ್ದೆಯಡಿ ಸೇರಿಸಲು ಸರ್ಕಾರ ಚಿಂತನೆ

17/03/2026 1:49 PM

ರಾಯಚೂರು ಜಿಲ್ಲೆಯಲ್ಲಿ ಹೊಸ KSRP ಪಡೆ ಸ್ಥಾಪನೆ ಬಗ್ಗೆ ಪರಿಶೀಲನೆ: ಗೃಹ ಸಚಿವ ಡಾ: ಜಿ.ಪರಮೇಶ್ವರ್

17/03/2026 1:44 PM
State News
KARNATAKA

BIG NEWS : ನಾಳೆಯಿಂದ ‘SSLC’ ಪರೀಕ್ಷೆ ಆರಂಭ : ವಿದ್ಯಾರ್ಥಿಗಳಿಗೆ ‘ಆಲ್ ದಿ ಬೆಸ್ಟ್’ ಹೇಳಿದ ಸಿಎಂ ಸಿದ್ದರಾಮಯ್ಯ

By kannadanewsnow0517/03/2026 2:05 PM KARNATAKA 1 Min Read

ಬೆಂಗಳೂರು : ನಾಳೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಆರಂಭವಾಗಲಿವೇ. ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ…

ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟಗಾರರಿಗೆ ಶಾಕ್: ಮಾದಕ ವಸ್ತು ನಿಯಂತ್ರಣ ಕಾಯ್ದೆಯಡಿ ಸೇರಿಸಲು ಸರ್ಕಾರ ಚಿಂತನೆ

17/03/2026 1:49 PM

ರಾಯಚೂರು ಜಿಲ್ಲೆಯಲ್ಲಿ ಹೊಸ KSRP ಪಡೆ ಸ್ಥಾಪನೆ ಬಗ್ಗೆ ಪರಿಶೀಲನೆ: ಗೃಹ ಸಚಿವ ಡಾ: ಜಿ.ಪರಮೇಶ್ವರ್

17/03/2026 1:44 PM

BIG NEWS : ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ಶಾಕ್ : ಗಡಿಪಾರು ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾ!

17/03/2026 1:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.