ಚಿತ್ರದುರ್ಗ : ಚಿತ್ರದುರ್ಗದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ನೇಣುಬಿಗಿದುಕೊಂಡು 8 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ! ಮಾಡಿಕೊಂಡಿರುವ ಘಟನೆ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಹಳವುದರ ಲಂಬಾಣಿಹಟ್ಟಿ ಗ್ರಾಮದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದು, ಗ್ರಾಮದ ಬೇಬಿ ಬಾಯಿ ಹಾಗೂ ಉಮೇಶ್ ನಾಯ್ಕ್ ದಂಪತಿಯ ಪುತ್ರಿ ಸಂಜನಾ (14) 8 ನೇ ತರಗತಿ ಓದುತ್ತಿದ್ದು, ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.