ಹತ್ರಾಸ್ : ಉತ್ತರ ಪ್ರದೇಶದ ಹತ್ರಾಸ್ನ ರತಿಭಾನ್ಪುರದಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದೆ. ಈ ಕಾಲ್ತುಳಿತದಲ್ಲಿ ಮೃತ ಪಟ್ಟವರ ಸಂಖ್ಯೆ ಹೆಚ್ಚುತ್ತಲೇ ಇದ್ದು ಇವರೆಗೂ 27 ಜನರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ದುರಂತದಲ್ಲಿ 15 ಮಹಿಳೆಯರು ಮತ್ತು ಮಕ್ಕಳು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮಹಿಳೆ ಮತ್ತು ಮಕ್ಕಳನ್ನು ಇಟಾ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.
#WATCH | Uttar Pradesh: Etah SSP Rajesh Kumar Singh says, "… A religious event was going on in Mughalgarhi village of Hathras district when the stampede occurred. So far 27 dead bodies have been received in the Etah Hospital, including 23 women, 3 children, and 1 man. The… https://t.co/Ih37mRehAY pic.twitter.com/xJa3AN4Yo4
— ANI (@ANI) July 2, 2024
ಭೋಲೆ ಬಾಬಾ ಅವರ ಸತ್ಸಂಗ ನಡೆಯುತ್ತಿತ್ತು ಎಂದು ಹೇಳಲಾಗುತ್ತಿದೆ. ನಂತರ ಮುಕ್ತಾಯದ ಸಮಯದಲ್ಲಿ ಕಾಲ್ತುಳಿತ ಉಂಟಾಯಿತು. ಈ ಘಟನೆಯಲ್ಲಿ 27 ಮಂದಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಮಹಿಳೆಯರು ಮತ್ತು ಮಕ್ಕಳು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಇಟಾ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.
BREAKING: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ: ನಾಳೆ ಬಿಜೆಪಿಯಿಂದ ಸಿಎಂ ಸಿದ್ಧರಾಮಯ್ಯ ನಿವಾಸಕ್ಕೆ ಮುತ್ತಿಗೆ