ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ಸೇರಿದಂತೆ 3 ಪ್ರಕರಣಗಳಿಗೆ ಸಂಬಂಧಿಸಿದಂತೆ ಇದೀಗ ಪ್ರಜ್ವಲ್ ರೇವಣ್ಣ ಅವರು ಜಾಮೀನು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಹೌದು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರಜ್ವಲ್ ರೇವಣ್ಣ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇದಿಗ 3 ಪ್ರಕರಣಗಳಲ್ಲಿ ಜಾಮೀನು ಕೋರಿ ಹೈ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಮೊದಲು ಸೆಷನ್ಸ್ ಕೋರ್ಟ್ ಪ್ರಜ್ವಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಹೀಗಾಗಿ 3 ಪ್ರಕರಣಗಳಿಗೆ ಸಂಬಂಧಿಸಿದಂತೆ ಇದೀಗ ಪ್ರಜ್ವಲ್ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.