ಹಾವೇರಿ : ಜಿಲ್ಲೆಯ ಶಿಗ್ಗಾಂವ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಶಿಗ್ಗಾಂವ ಕಾಂಗ್ರೆಸ್ ಅಭ್ಯರ್ಥಿ ಅಕಾಂಕ್ಷಿಗಳು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಬುಧವಾರ ಶಿಗ್ಗಾಂವ ಕ್ಷೇತ್ರಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡುವ ಮುನ್ನವೇ ಶಿಗ್ಗಾಂವ ಐಬಿ ಮುಂದೆ ಮಾಜಿ ಶಾಸಕ ಅಜ್ಜಂಪೀರ ಖಾದ್ರಿ ಹಾಗೂ ಯಾಸೀರ ಅಹ್ಮದಖಾನ್ ಪಠಾಣ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದಿದೆ.
ಹೌದು ಇಂದು ಸಚಿವ ಸತೀಶ್ ಜಾರಕಿಹೊಳಿ ಹಾವೇರಿ ಜಿಲ್ಲೆಯ ಶಿಗ್ಗಾವ್ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಿದರು ಈ ವೇಳೆ ಅವರನ್ನು ಕಾರಿನಿಂದ ಕೆಳಗೆ ಇಳಿಯಲು ಬಿಡದೆ ಕಾಂಗ್ರೆಸ್ ಆಕಾಂಕ್ಷಿಗಳಾದ ಅಜ್ಜಂಪಿರ್ ಖಾದ್ರಿ ಹಾಗೂ ಯಾಸೀರ ಅಹ್ಮದಖಾನ್ ಪಠಾಣ ಶಕ್ತಿ ಪ್ರದರ್ಶನ ಮಾಡಿದ್ದು, ಸಹಜವಾಗಿ ಸಚಿವ ಸತೀಶ ಜಾರಕಿಹೊಳಿ ಅಸಮಾಧಾನ ಹೊರಹಾಕಿ ಆಕಾಂಕ್ಷಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.
ಹಾಗಾಗಿ ಟಿಕೆಟ್ ಆಕಾಂಕ್ಷಿಗಳ ಜೊತೆಗೆ ಸತೀಶ ಜಾರಕಿಹೊಳಿ ಪ್ರತ್ಯೇಕವಾಗಿ ಚರ್ಚೆ ಮಾಡಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ಪ್ರವಾಸಿ ಮಂದಿರದಲ್ಲಿ ಪ್ರತ್ಯೇಕವಾಗಿ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ. ಶಿಗ್ಗಾವಿ ಐಬಿ ಮುಂದೆ ಬೆಂಬಲಿಗರಿಂದ ಹೈಡ್ರಾಮ ನಡೆದಿದೆ. ಸತೀಶ್ ವಾಪಸ್ ಆಗುತ್ತಿದ್ದಾಗ ಬಾಗಿಲಿನ ಗಾಜು ಪುಟುಪುಡಿಯಾಗಿದೆ.
ಈ ವೇಳೆ ಕಾರ್ಯಕರ್ತರ ಗಲಾಟೆಯಲ್ಲಿ ಐಬಿಯ ಗಾಜು ಪುಡಿ ಪುಡಿ ಆಗಿದೆ. ಟಿಕೆಟ್ ಆಕಾಂಕ್ಷಿಗಳ ಬೆಂಬಲಗರಿಂದ ಹೈಡ್ರಾಮಾ ನಡೆದಿದೆ. ಹಾಗಾಗಿ ಸಚಿವ ಸತೀಶ್ ಜಾರಕಿಹೊಳಿ, ಇಬ್ಬರಿಗೂ ಕೂಡ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಟಿಕೆಟ್ ಆಕಾಂಕ್ಷಿಗಳಾದ ಯಾಸಿರ್ ಖಾನ್ ಪಠಾಣ್ ಅಜ್ಜಂಪಿರ್ ಖಾದ್ರಿ ಹಾಗೂ ಸೋಮಣ್ಣ ಬೇವಿನಮರದ ಆರ್ ಶಂಕರ್ ರಾಜು ಕೊನ್ನೂರ್ ಜೊತೆಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.