ಉಡುಪಿ : ಸದ್ಯ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಆಗುತ್ತಿದ್ದು, ಇದೀಗ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿ ಗುಡ್ಡ ಕುಸಿತದಿಂದ ವ್ಯಕ್ತಿ ಒಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಹೌದು ಉಡುಪಿ ಜಿಲ್ಲೆಯಲ್ಲಿ ಬಾರಿ ಮಳೆಗೆ ಮೊದಲ ಬಲಿಯಾಗಿದ್ದು, ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಎಂಬಲ್ಲಿ ದುರಂತ ಸಂಭವಿಸಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಗುಡ್ಡ ಕುಸಿದು ಹಳ್ಳಿ ಬೇರು ನಿವಾಸಿ ಅಂಬ (45) ಸಾವನಪ್ಪಿದ್ದಾರೆ.ಗುಡ್ಡ ಕುಸಿದು ಮಣ್ಣಿನ ಅಡಿ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.