ಹಾವೇರಿ : ಜಿಲ್ಲೆಯಲ್ಲಿ ಬೇಕಾಬಿಟ್ಟಿಯಾಗಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದ್ದು, ಖಚಿತವಾದಂತಹ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ಮಾಡಿದ್ದು ಸುಮಾರು,35,496 ರೂ. ಮೌಲ್ಯದ 80.24 ಲೀಟರ್ ಮದ್ಯವನ್ನು ಜಪ್ತಿ ಮಾಡಿಕೊಂಡಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ಮಾರ್ಗದರ್ಶನದಲ್ಲಿ ವಿಶೇಷ ದಾಳಿ ನಡೆಸಿತ್ತು. ದಾಳಿಯ ವೇಳೆ ಜಿಲ್ಲೆಯ ವಿವಿಧ ಠಾಣೆಗಳ ಪೊಲೀಸರು 19 ಜನ ಆರೋಪಿಗಳ ವಿರುದ್ಧ 19 ಪ್ರಕರಣಗಳನ್ನು ದಾಖಲಿಸಿದ್ದಾರೆ. ಇನ್ನು ಮುಂದೆ ಜಿಲ್ಲೆಯಲ್ಲಿ ಅಕ್ರಮವಾಗಿ ಮಧ್ಯ ಮಾರಾಟ ಕಂಡು ಬಂದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.