ಮೈಸೂರು: ಮೈಸೂರು: ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಹೊರ ಬಂದಿದೆ ಅಂಥ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯವರು ಹೊಸ ಬಾಂಬ್ ಸಿಡಿಸಿದ್ದಾರೆ.
ಅವರು ಇಂದು ಸಚಿವರಾದ ಬಳಿಕ ಮೊದಲ ಬಾರಿಗೆ ಮೈಸೂರಿನ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದರು. ಇದೇ ವೇಳೆ ಅವರು ಮಾತನಾಡಿ, ಇಷ್ಟು ದಿನ ಹೊರಗೆ ಬಾರದ ಹಗರಣ ಈಗ ಬಂದಿದ್ದು ಹೇಗೆ? ಇದರ ಹಿಂದೆ ಸಿಎಂ ಖುರ್ಚಿ ಮೇಲೆ ಟವಲ್ ಹಾಕಿರುವವರ ಪಾತ್ರ ಇದೆ. ಸಿಡಿ ಫ್ಯಾಕ್ಟರಿ ಬಂದ್ ಆಯ್ತು ಮುಡಾ ಫ್ಯಾಕ್ಟರಿ ಶುರುವಾಯಿತು ಎಂದು ಹೇಳಿದರು.