ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಎಸ್ಐಟಿ ಚುರುಕುಗೊಳಿಸಿದೆ. ಈ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ಬಿ.ನಾಗೇಂದ್ರ, ಬಸನಗೌಡ ದದ್ದಲ್ ಗೆ ಎಸ್ಐಟಿ ನೋಟಿಸ್ ಜಾರಿಗೊಳಿಸಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ಅವ್ಯವಹಾರ ಪ್ರಕರಣ ಬೆಳಕಿಗೆ ಬಂದ ನಂತ್ರ, ಸ್ವ ಇಚ್ಛೆಯಿಂದ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದರು. ಈ ಪ್ರಕರಣವನ್ನು ರಾಜ್ಯ ಸರ್ಕಾರವು ಎಸ್ಐಟಿ ತನಿಖೆಗೆ ವಹಿಸಿ ಆದೇಶಿಸಿತ್ತು.
ಈ ಪ್ರಕರಣವನ್ನು ತನಿಖೆಗೆ ಕೈಗೊಂಡಿರುವಂತ ಎಸ್ಐಟಿ ಅಧಿಕಾರಿಗಳು, ಈಗಾಗಲೇ ಹಲವರನ್ನು ವಿಚಾರಣೆ ನಡೆಸಿದ್ದಾರೆ. ಈಗ ಈ ಪ್ರಕರಣ ಸಂಬಂಧ ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಗೆ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ಸೂಚಿಸಿದ್ದಾರೆ.
ಅಂದಹಾಗೇ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 185 ಕೋಟಿ ಅಕ್ರಮ ನಡೆದಿದೆ ಎಂಬುದಾಗಿ ಆರೋಪಿಸಿ, ನಿಗಮದ ಅಧಿಕಾರಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಆ ಬಳಿಕ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಅವ್ಯವಹಾರ ಬೆಳಕಿಗೆ ಬಂದಿತ್ತು.
BREAKING: ವಿಧಾನ ಪರಿಷತ್ ಸದಸ್ಯರಾಗಿ ‘ಬಸನಗೌಡ ಬಾದರ್ಲಿ’ ಅವಿರೋಧವಾಗಿ ಆಯ್ಕೆ | MLC Election 2024
‘ಮುಖ್ಯಮಂತ್ರಿ ಕುರ್ಚಿ’ ಮೇಲೆ ಕಣ್ಣಿಟ್ಟವರಿಂದಲೇ ‘ಮುಡಾ ಹಗರಣ’ ಬಹಿರಂಗ: ‘HDK’ ಗಂಭೀರ ಆರೋಪ