ಧಾರವಾಡ : ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷರಾಗಿರುವ ಪ್ರಮೋದ್ ಮುತಾಲಿಕ್ ಹಾಗೂ ಆಂದೋಲದ ಸಿದ್ದಲಿಂಗ ಶ್ರೀ ಸ್ವಾಮೀಜಿ ಸೇರಿದಂತೆ ಶ್ರೀ ರಾಮ ಸೇನೆಯ ಪ್ರಮುಖ ಕಾರ್ಯಕರ್ತರ ಫೇಸ್ಬುಕ್ ಅಕೌಂಟ್ ಗಳನ್ನು ಬ್ಲಾಕ್ ಮಾಡಲಾಗಿದೆ ಎಂದು ಶ್ರೀರಾಮ ಸೇನಾ ಸಂಘಟಿತ ಕಾರ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ತಿಳಿಸಿದ್ದಾರೆ.
ಇಂದು ಧಾರವಾಡದಲ್ಲಿ ಮಾತನಾಡಿದ ಅವರು, ಶ್ರೀರಾಮ ಸೇನೆ ಕಾರ್ಯಕರ್ತರ ಫೇಸ್ಬುಕ್ ಅಕೌಂಟ್ ಬ್ಲಾಕ್ ಮಾಡಲಾಗಿದೆ ಎಂದು ಧಾರವಾಡ ನಗರದಲ್ಲಿ ಗಂಗಾಧರ್ ಕುಲಕರ್ಣಿ ವಾಗ್ದಾಳಿ ನಡೆಸಿದ್ದಾರೆ. ಎರಡು ದಿನದಿಂದ ನಮ್ಮ ಫೇಸ್ ಬುಕ್ ಅಕೌಂಟ್ ಬ್ಲಾಕ್ ಆಗಿದೆ. ಲವ್ ಜಿಹಾದ್ ವಿರುದ್ಧ ನಾವು ಅಭಿಯಾನ ಮಾಡುತ್ತಿದ್ದೇವೆ ಇದನ್ನು ಹತ್ತಿಕ್ಕಲು ನಮ್ಮ ಫೇಸ್ಬುಕ್ ಅಕೌಂಟ್ ಬ್ಲಾಕ್ ಮಾಡಲಾಗಿದೆ.
ಇದರಿಂದ ಸರ್ಕಾರ ಅಥವಾ ಯಾರದ್ದೋ ಷಡ್ಯಂತರವಿದೆ. ಪ್ರಮೋದ್ ಮುತಾಲಿಕ್, ಸಿದ್ದಲಿಂಗ ಶ್ರೀ ಸೇರಿದಂತೆ ಪ್ರಮುಖರ ಖಾತೆ ಬ್ಲಾಕ್ ಆಗಿದ್ದು, ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿ ವಾತಾವರಣ ನಿರ್ಮಾಣವಾಗಿದೆ. ಸರ್ಕಾರವೇ ಮಾಡಿದ್ದರೆ ಯಾಕೆ ಅಂತ ಕಾರಣ ಕೊಡಬೇಕು. ಫೇಸ್ಬುಕ್ ಸಂಸ್ಥೆ ಮಾಡಿದ್ದರೆ ಸರ್ಕಾರ ಆ ಕುರಿತು ಕ್ರಮ ಕೈಗೊಳ್ಳಲಿ ಎಂದು ಶ್ರೀರಾಮ ಸೇನೆಯ ಕಾರ್ಯಧ್ಯಕ್ಷ ಗಂಗಾಧರ್ ಕುಲಕರ್ಣಿ ಒತ್ತಾಯ ಪಡಿಸಿದರು.