ಬೆಂಗಳೂರು : ಆರು ತಿಂಗಳಿಗೊಮ್ಮೆ ಐಪಿಎಸ್ ಅಧಿಕಾರಿಗಳ ಜೊತೆಗೆ ಸಿಎಂ ಸಭೆ ನಡೆಸುತ್ತಾರೆ. ಆದರೆ ಕಾರಣಾಂತರಗಳಿಂದ ದಿನಾಂಕ ಮುಂದೂಡಲಾಗಿದ್ದು ಇದೀಗ ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲಾ ಐಪಿಎಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ.
ಇಂದು ರಾಜ್ಯದ ಎಲ್ಲಾ ಐಪಿಎಸ್ ಅಧಿಕಾರಿಗಳ ಜೊತೆಗೆ ಸಿಎಂ ಸಭೆ ನಡೆಸಲಿದ್ದು, 6 ತಿಂಗಳಿಗೊಮ್ಮೆ ಐಪಿಎಸ್ ಅಧಿಕಾರಿಗಳ ಜೊತೆಗೆ ಸಿಎಂ ಸಭೆ ನಡೆಸಲಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ಐಡಿಜಿಪಿ ಕಚೇರಿಯಲ್ಲಿ ಸಿಎಂ ಸಭೆ ನಡೆಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವರ ನೇತೃತ್ವದಲ್ಲಿ ಈ ಒಂದು ಸಭೆ ನಡೆಯಲಿದೆ.
ಈ ಹಿಂದೆ ನಿಗದಿ ಮಾಡಿದ ಸಭೆ ಮುಂದೂಡಲಾಗಿತ್ತು. ಇದೀಗ ಇಂದು ಐಪಿಎಸ್ ಅಧಿಕಾರಿಗಳ ಜೊತೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ ಪರಮೇಶ್ವರ್ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ.ಕಾನೂನು ಸುವ್ಯವಸ್ಥೆ ಸೇರಿದಂತೆ ಇಲಾಖೆಯ ಅನೇಕ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.