ಉಡುಪಿ : ಉಡುಪಿ ಜಿಲ್ಲೆಯ ಆದ್ಯಂತ ಧಾರಾಕಾರ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಇಂದು ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಕೆ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.
ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇಂದು ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಕೆ ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ. ಆದರೆ ಯುಜಿ, ಪಿಜಿ, ಐಟಿಐ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ರಜೆ ಇರಲ್ಲ ಎಂದು ತಿಳಿಸಿದ್ದಾರೆ.
ಇನ್ನೂ ಉತ್ತರ ಕನ್ನಡದಲ್ಲಿ 5 ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ರಜೆ ಘೋಷಿಸಿ ಉತ್ತರ ಕನ್ನಡ ಡಿಸಿ ಗಂಗೂಬಾಯ್ ಮಾನಕರ್ ಆದೇಶ ಹೊರಡಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಕುಮಟಾ, ಭಟ್ಕಳ,ಅಣ್ಣಾವರ,ಹಾಗೂ ಅಂಕೋಲ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಶಿರಸಿ, ಸಿದ್ದಾಪುರ,ಮುಂಡಗೋಡ ತಾಲೂಕಿನ ಕಾಲೇಜಿಗೆ ಕೂಡ ರಜೆ ಘೋಷಿಸಲಾಗಿದೆ.