Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಚೀನಾದ ಬಾವಲಿಗಳಲ್ಲಿ ಮಾರಕ `ಮೆದುಳು ವೈರಸ್’ ಪತ್ತೆ : 75% ಸಾವಿನ ಅಪಾಯದ ಎಚ್ಚರಿಕೆ ನೀಡಿದ ವಿಜ್ಞಾನಿಗಳು.!

26/06/2025 8:57 AM

BIG NEWS : ರಾಜ್ಯದ ಪ್ರತಿ ಜಿಲ್ಲೆಗೂ `ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ’ ನಿರ್ಮಾಣ : ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಘೋಷಣೆ.!

26/06/2025 8:53 AM

BREAKING : ಉತ್ತರಾಖಂಡದಲ್ಲಿ ಬೆಳ್ಳಂಬೆಳಗ್ಗೆ ಘೋರ ದುರಂತ : ನದಿಗೆ ಬಿದ್ದ ಪ್ರಯಾಣಿಕರಿದ್ದ ಬಸ್, ಹಲವರು ಸಾವಿನ ಶಂಕೆ | Bus Accident

26/06/2025 8:52 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಎಸ್‍ಸಿ/ಎಸ್‍ಟಿ ವರ್ಗದವರಿಗೆ ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್‌: ಸ್ಪರ್ಧಾತ್ಮಕ ಪರೀಕ್ಷೆ ಸಿದ್ದತೆಗಳಿಗಾಗಿ ದೆಹಲಿಯಲ್ಲಿ ಉತ್ತಮ ಹಾಸ್ಟೆಲ್ ವ್ಯವಸ್ಥೆ
KARNATAKA

ಎಸ್‍ಸಿ/ಎಸ್‍ಟಿ ವರ್ಗದವರಿಗೆ ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್‌: ಸ್ಪರ್ಧಾತ್ಮಕ ಪರೀಕ್ಷೆ ಸಿದ್ದತೆಗಳಿಗಾಗಿ ದೆಹಲಿಯಲ್ಲಿ ಉತ್ತಮ ಹಾಸ್ಟೆಲ್ ವ್ಯವಸ್ಥೆ

By kannadanewsnow0706/07/2024 8:27 AM

ಬೆಂಗಳೂರು: ಐಎಎಸ್, ಐಆರ್‍ಎಸ್ ಸೇರಿ ಮತ್ತಿತರೆ ಸ್ಪರ್ಧಾತ್ಮಕ ಪರೀಕ್ಷೆ ಸಿದ್ದತೆಗಳಿಗಾಗಿ ದೆಹಲಿಯಲ್ಲಿ ಎಸ್‍ಸಿ/ಎಸ್‍ಟಿ ಮಕ್ಕಳಿಗೆ ಉತ್ತಮ ಹಾಸ್ಟೆಲ್ ಕಟ್ಟಿಸುವ ಜೊತೆಗೆ ತಿಂಗಳಿಗೆ 15 ಸಾವಿರ ರೂಪಾಯಿ ಕೊಡಲಾಗುವುದು (ಸದ್ಯ 10 ಸಾವಿರ ಕೊಡಲಾಗುತ್ತಿದ್ದು 5 ಸಾವಿರ ಹೆಚ್ಚಿಸಲಾಗುವುದು. ಈ ಸಂಬಂಧ ತಕ್ಷಣ ಆದೇಶ ಹೊರಡಿಸಲಾಗುವುದು) ದೆಹಲಿ ಹಾಸ್ಟೆಲ್ ನಲ್ಲಿ ಹೈಟೆಕ್ ಲೈಬ್ರೆರಿ ಮಾಡಲಾಗುವುದು. ಅಲ್ಲಿ ಎಲ್ಲಾ ರೀತಿಯ ಪುಸ್ತಕಗಳು ಸಿಗುವ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರಾಜ್ಯ ಅಭಿವೃದ್ಧಿ ಪರಿಷತ್ ಸಭೆಯಲ್ಲಿ ಮಾತನಾಡಿದ ಅವರು, ಇಡೀ ದೇಶದಲ್ಲಿ ಎಸ್‍ಸಿಎಸ್‍ಪಿ / ಟಿಎಸ್‍ಪಿ ಕಾಯ್ದೆ ಮಾಡಿರುವುದು ನಾವು ಮಾತ್ರ. ಜನಸಂಖ್ಯೆಗೆ ಅನುಗುಣವಾಗಿ ಎಸ್‍ಸಿ / ಎಸ್‍ಟಿ ಸಮುದಾಯಕ್ಕೆ ಹಣ ಖರ್ಚು ಕೊಡುತ್ತಿರುವುದು ನಮ್ಮ ಸರ್ಕಾರ ಮಾತ್ರ ಎಂದು ಅವರು ತಿಳಿಸಿದರು.

2024-25 ನೇ ಸಾಲಿನಲ್ಲಿ ಎಸ್‍ಸಿಪಿ/ಟಿಎಸ್‍ಪಿ ಯೋಜನೆಯಲ್ಲಿ ಲಭ್ಯವಿರುವ ಹಣವನ್ನು ಖರ್ಚು ಮಾಡಲು ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗಿದೆ. ರಾಜ್ಯದ ಅಭಿವೃದ್ಧಿ ಆಯವ್ಯಯ ಈ ಸಾಲಿನಲ್ಲಿ ಒಟ್ಟು 160000 ಕೋಟಿ. ಇದರಲ್ಲಿ ಎಸ್‍ಸಿಪಿ/ಟಿಎಸ್‍ಪಿ ಯೋಜನೆಗೆ ಸುಮಾರು 39121.46 ಕೋಟಿ ಎಸ್‍ಸಿಎಸ್‍ಪಿ / ಟಿಎಸ್‍ಪಿ ಅಡಿ 34 ಇಲಾಖೆಗಳಿಗೆ ಹಂಚಿಕೆ ಮಾಡಿರುವ ಹಣ ಕ್ರಿಯಾಯೋಜನೆಯಲ್ಲಿದೆ. ಹಿಂದಿನ ವರ್ಷ 97.81 ಕೋಟಿ ಉಳಿತಾಯವಾಗಿದೆ. ಈ ಹಣವೂ ಸೇರಿದೆ.

ಕಳೆದ ವರ್ಷಕ್ಕಿಂತ ಈ ವರ್ಷ 3900 ಕೋಟಿ ಹೆಚ್ಚಾಗಿದೆ. 3900 ಕೋಟಿ ಹೆಚ್ಚುವರಿ ಹಣ ಈ ವರ್ಷ ನೀಡಿದ್ದೇವೆ. ಈ ಹಣ ಇಲಾಖೆಗಳಿಗೆ ಹಂಚಿಕೆಯಾಗಿದ್ದು ಇದರ ಸದುಪಯೋಗ ಆಗಬೇಕು. ಸಮಾಜ ಕಲ್ಯಾಣ ಇಲಾಖೆ, ನಿಗಮಗಳು ಕಾಯ್ದೆಯ ಉದ್ದೇಶಕ್ಕೆ ಪೂರಕವಾಗಿ ಕೆಲಸ ಮಾಡಬೇಕು. ಶೇ.100 ಸಾಧನೆ ಆಗಬೇಕು. ಇದರಲ್ಲಿ ನಿರ್ಲಕ್ಷ್ಯ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ. ಕಾಯ್ದೆಯಲ್ಲಿದ್ದ 7ಡಿ ರದ್ದು ಮಾಡಿದ ರೀತಿಯಲ್ಲೇ 7ಸಿ ಕೂಡ ರದ್ದು ಮಾಡಬೇಕು ಎನ್ನುವ ಶಾಸಕ ನರೇಂದ್ರಸ್ವಾಮಿ ಅವರು ಸಲಹೆ ನೀಡಿದ್ದಾರೆ. ಈ ಸಲಹೆಯ ಸಾಧಕ ಭಾದಕಗಳನ್ನು ಪರಿಶೀಲಿಸಲಾಗುವುದು ಎಂದರು.

ಖಾಲಿ ಇರುವ ಹೋಬಳಿಗಳಲ್ಲೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಆರಂಭಿಸಲೇಬೇಕು. ಆಯಾ ಹೋಬಳಿಯ ವಿದ್ಯಾರ್ಥಿಗಳಿಗೆ ಶೇ75 ರಷ್ಟು ಸೀಟು, ಉಳಿದ ಶೇ25 ರಷ್ಟು ಸೀಟುಗಳನ್ನು ಇತರೆ ಪ್ರದೇಶದ ವಿಧ್ಯಾರ್ಥಿಗಳಿಗೆ ವಸತಿ ಶಾಲೆಗಳಲ್ಲಿ ನೀಡಬೇಕು. ಸರ್ಕಾರಿ ಶಾಲೆಗಿಂತ ಕ್ರೈಸ್ ನಲ್ಲಿ ಓದಿರುವ ಬಡ ವಿಧ್ಯಾರ್ಥಿನಿ ಕ್ರೈಸ್ ಶಾಲೆಯಲ್ಲಿ ಓದಿ ಮೊದಲ ರ್ಯಾಂಕ್ ಪಡೆದಿದ್ದಾರೆ. ಇದನ್ನು ಪೆÇ್ರೀತ್ಸಾಹಿಸುತ್ತಲೇ ಇತರೆ ನ್ಯೂನ್ಯತೆಗಳನ್ನು ಸರಿಪಡಿಸಲು ಅಧಿಕಾರಿಗಳು ಶ್ರಮಿಸಬೇಕು. ಬಜೆಟ್‍ನಲ್ಲಿ ನಾವು ಘೋಷಿಸಿರುವ ಎಲ್ಲಾ ಕಾರ್ಯಕ್ರಮಗಳೂ ಜಾರಿ ಮಾಡಲೇಬೇಕು. ಹಿಂದಿನ ಸರ್ಕಾರ ಮೂರು ವರ್ಷ ಕ್ರೈಸ್ ಮಕ್ಕಳಿಗೆ ಬಾತ್ ರೂಮ್ ಕಿಟ್ ಕೊಡಲೇ ಇಲ್ಲ. ಈಗ ನಾವು ಸರಿಯಾಗಿ ವಿತರಿಸುತ್ತಿದ್ದೇವೆ.

ಆಶ್ರಮ ಶಾಲೆಗಳಲ್ಲಿ ರಾತ್ರಿ ವೇಳೆ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುತ್ತಾರೆ ಎನ್ನುವುದು ಕಂಡುಬಂದಿದೆ. ಇದಕ್ಕೆ ಅವಕಾಶ ಆಗಬಾರದು. ಮನೆಗೆ ಕರೆದೊಯ್ಯದಂತೆ ಪೆÇೀಷಕರಿಗೆ ತಿಳಿಸಬೇಕು. ಹಳ್ಳಿಗಾಡು, ಬಡ ಕುಟುಂಬಗಳಿಗೆ ಸರ್ಕಾರದಿಂದ ಬರುವ ಸವಲತ್ತುಗಳನ್ನು ಸರಿಯಾಗಿ ತಲುಪಿಸಬೇಕು. ಇದರಲ್ಲಿ ವಿಫಲರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ನಾವು ಕೊಟ್ಟ ಅನುದಾನ ಆಯಾ ಉದ್ದೇಶಗಳಿಗೇ ಬಳಕೆಯಾಗಬೇಕು. ಇದರಲ್ಲಿ ಯಾವುದೇ ರಾಜಿ ಇಲ್ಲದಂತೆ ಆಯಾ ಸಮುದಾಯಗಳಿಗೆ ಸವಲತ್ತು ತಲುಪಿಸಬೇಕು. ಹಾಸ್ಟೆಲ್‍ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸದಿದ್ದರೆ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು.

10 ವರ್ಷದಲ್ಲಿ ಈ ಯೋಜನೆಯಿಂದ ಸಮುದಾಯದ ಮೇಲೆ ಬೀರಿರುವ ಪರಿಣಾಮ, ಸಮುದಾಯಕ್ಕೆ ಯೋಜನೆ ತಲುಪಿರುವ ಪ್ರಮಾಣದ ಬಗ್ಗೆ, ಹಾಗೂ ಅವರ ಆರ್ಥಿಕ ಸ್ಥಿತಿ ಪ್ರಗತಿ ಆಗಿರುವ ಬಗ್ಗೆ ಮೌಲ್ಯಮಾಪನ ಮಾಡಲಾಗುವುದು. 3 ತಿಂಗಳ ಬಳಿಕ ಮತ್ತೊಮ್ಮೆ ಪರಿಷತ್ ಸಭೆ ಕರೆಯುತ್ತೇವೆ. ಯಾರಿಂದ ಲೋಪ ಆಗಿದೆ ಎಂದು ಗೊತ್ತಾದರೆ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು.

ಈ ವರ್ಷದ ಕ್ರಿಯಾಯೋಜನೆಯನ್ನು ಸಭೆಯಲ್ಲಿ ಶಾಸಕರು/ಸಚಿವರು/ ಅಧಿಕಾರಿಗಳು ನೀಡಿದ ಸಲಹೆಗಳ ಸಮೇತ ಜಾರಿ ಆಗಬೇಕು ಎನ್ನುವ ಸೂಚನೆಯನ್ನು ಮುಖ್ಯಮಂತ್ರಿಗಳು ನೀಡಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಸಚಿವರಾದ ಹೆಚ್.ಕೆ. ಪಾಟೀಲ್, ಪ್ರಿಯಾಂಕ್ ಖರ್ಗೆ, ಡಾ. ಎಂ.ಸಿ. ಸುಧಾಕರ್, ಪರಿಷತ್ತಿನ ಸದಸ್ಯರಾಗಿರುವ ಶಾಸಕರುಗಳಾದ ಪ್ರಸಾದ್ ಅಬ್ಬಯ್ಯ, ಬಸಂತಪ್ಪ, ಶ್ರೀನಿವಾಸ್, ನರೇಂದ್ರಸ್ವಾಮಿ, ಕೃμÁ್ಣನಾಯಕ್, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ಸಂಸದರಾದ ಸುನಿಲ್ ಬೋಸ್ ಪ್ರಕಾಶ್ ಸೇರಿದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯೆಲ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧೀ ಆಯುಕ್ತರಾದ ಡಾ. ಶಾಲಿನಿ ರಜನೀಶ್ ಗೋಯೆಲ್, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ. ಮಣಿವಣ್ಣನ್ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

Good news for SC/ST category: Good hostel arrangements in Delhi for competitive exam preparations
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಪ್ರತಿ ಜಿಲ್ಲೆಗೂ `ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ’ ನಿರ್ಮಾಣ : ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಘೋಷಣೆ.!

26/06/2025 8:53 AM1 Min Read

BIG NEWS : ವಿದ್ಯುತ್ ಶುಲ್ಕದ ಮೇಲೆ `ತೆರಿಗೆ’ ರದ್ದು : ಹೈಕೋರ್ಟ್ ಮಹತ್ವದ ಆದೇಶ

26/06/2025 8:43 AM1 Min Read

ಸಾರ್ವಜನಿಕರೇ ಗಮನಿಸಿ : ಏಕ ಬಳಕೆಯ `ಪ್ಲಾಸ್ಟಿಕ್’ ವಸ್ತುಗಳ ಬಳಕೆ ಮಾಡಿದ್ರೆ ದಂಡ ಫಿಕ್ಸ್.!

26/06/2025 8:34 AM1 Min Read
Recent News

SHOCKING : ಚೀನಾದ ಬಾವಲಿಗಳಲ್ಲಿ ಮಾರಕ `ಮೆದುಳು ವೈರಸ್’ ಪತ್ತೆ : 75% ಸಾವಿನ ಅಪಾಯದ ಎಚ್ಚರಿಕೆ ನೀಡಿದ ವಿಜ್ಞಾನಿಗಳು.!

26/06/2025 8:57 AM

BIG NEWS : ರಾಜ್ಯದ ಪ್ರತಿ ಜಿಲ್ಲೆಗೂ `ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ’ ನಿರ್ಮಾಣ : ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಘೋಷಣೆ.!

26/06/2025 8:53 AM

BREAKING : ಉತ್ತರಾಖಂಡದಲ್ಲಿ ಬೆಳ್ಳಂಬೆಳಗ್ಗೆ ಘೋರ ದುರಂತ : ನದಿಗೆ ಬಿದ್ದ ಪ್ರಯಾಣಿಕರಿದ್ದ ಬಸ್, ಹಲವರು ಸಾವಿನ ಶಂಕೆ | Bus Accident

26/06/2025 8:52 AM

‘ಸ್ಥಳೀಯರನ್ನು ಹೊರ ಹಾಕುವುದರಿಂದ ಅರಣ್ಯ ಉಳಿಸಲು ಸಾಧ್ಯವಿಲ್ಲ’: ಪರಿಸರ ಸಚಿವ ಭೂಪೇಂದರ್ ಯಾದವ್

26/06/2025 8:47 AM
State News
KARNATAKA

BIG NEWS : ರಾಜ್ಯದ ಪ್ರತಿ ಜಿಲ್ಲೆಗೂ `ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ’ ನಿರ್ಮಾಣ : ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಘೋಷಣೆ.!

By kannadanewsnow5726/06/2025 8:53 AM KARNATAKA 1 Min Read

ಬೆಂಗಳೂರು : ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್…

BIG NEWS : ವಿದ್ಯುತ್ ಶುಲ್ಕದ ಮೇಲೆ `ತೆರಿಗೆ’ ರದ್ದು : ಹೈಕೋರ್ಟ್ ಮಹತ್ವದ ಆದೇಶ

26/06/2025 8:43 AM

ಸಾರ್ವಜನಿಕರೇ ಗಮನಿಸಿ : ಏಕ ಬಳಕೆಯ `ಪ್ಲಾಸ್ಟಿಕ್’ ವಸ್ತುಗಳ ಬಳಕೆ ಮಾಡಿದ್ರೆ ದಂಡ ಫಿಕ್ಸ್.!

26/06/2025 8:34 AM

BIG NEWS : ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಇ-ಆಸ್ತಿ ತಂತ್ರಾಂಶದಲ್ಲಿ `ಇ-ಆಸ್ತಿ ಖಾತಾ’ ದಾಖಲೆ ಪಡೆಯಲು ಅವಕಾಶ.!

26/06/2025 8:31 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.