ಬೆಂಗಳೂರು : ಮೊಬೈಲ್ ಚಾರ್ಜಿಂಗ್ ಹಾಕಿದ ಸಂದರ್ಭದಲ್ಲಿ ಅನೇಕ ದುರಂತಗಳು ಸಂಭವಿಸುತ್ತಲೇ ಇರುತ್ತವೆ. ಜನರಲ್ಲಿ ಎಷ್ಟೇ ಜಾಗೃತಿ ಮೂಡಿಸಿದರು ಸಹ ನಿರ್ಲಕ್ಷಕ್ಕೆ ತಮ್ಮ ಜೀವ ಕಳೆದುಕೊಳ್ಳುತ್ತಾರೆ. ಇದೀಗ ಮೊಬೈಲ್ ಚಾರ್ಜ್ ಹಾಕುವಾಗ ಕರೆಂಟ್ ಶಾಕ್ ಗೆ ಯುವಕ ಸಾವನ್ನಪ್ಪಿದ್ದಾನೆ.
ಹೌದು ಬೀದರ್ ಮೂಲದ ಶ್ರೀನಿವಾಸ್ ಎನ್ನುವ ವಿದ್ಯಾರ್ಥಿ ಸಾವನಪ್ಪಿದ್ದಾನೆ ಮೃತ ಶ್ರೀನಿವಾಸ್ ಬೆಂಗಳೂರಿನಲ್ಲಿ ಸಾಫ್ಟ್ವೇರ್ ಕೋರ್ಸ್ ಮಾಡುತ್ತಿದ್ದ ಎನ್ನಲಾಗಿದೆ. ಮೊಬೈಲ್ ಚಾರ್ಜಿಂಗ್ ವೈರ್ ಇಂದ ವಿದ್ಯುತ್ ಪ್ರವಹಿಸಿ ಶ್ರೀನಿವಾಸ್ ಎನ್ನುವ ವಿದ್ಯಾರ್ಥಿಯೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ. ಈ ವೇಳೆ ಮೊಬೈಲ್ ಚಾರ್ಜರ್ ವೈರ್ ಕೂಡ ಸ್ವಲ್ಪ ಡ್ಯಾಮೇಜ್ ಆಗಿತ್ತು ಎನ್ನಲಾಗಿದೆ.
ಕರೆಂಟ್ ಶಾಕ್ ನಿಂದ ರೂಮ್ನಲ್ಲಿ ವಿದ್ಯಾರ್ಥಿ ಶ್ರೀನಿವಾಸ ಬಿದ್ದಿದ್ದ. ಈ ವೇಳೆ ಊಟಕ್ಕೆ ಕರೆಯಲು ಬಂದಿದ್ದ ಮತ್ತೊಬ್ಬ ವಿದ್ಯಾರ್ಥಿಗೂ ಕರೆಂಟ್ ಶಾಕ್ ತಗುಲಿದೆ. ಅದೃಷ್ಟವಶತ ಪ್ರಾಣಾಪಾಯದಿಂದ ಪರಗಿದ್ದಾನೆಮ್ ತಕ್ಷಣ ಬಸವೇಶ್ವರನಗರ ಪೊಲೀಸರಿಗೆ ಪಿಜಿ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ವಿಧಿ ವಿಜ್ಞಾನ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೇಸ್ ದಾಖಲಿಸಿ ಬಸವೇಶ್ವರನಗರ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.