ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಘಿ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಜನರಲ್ಲಿ ಆತಂಕ ಮೂಡಿಸಿದೆ. ಕಳೆದ ನಾಲ್ಕು ದಿನಗಳಲ್ಲಿ ಆರು ಮಕ್ಕಳು ಡೆಂಘಿಗೆ ಬಲಿಯಾಗಿದ್ದಾರೆ. ಇದೀಗ ಬೆಂಗಳೂರಿನಲ್ಲಿ ಕೂಡ ಡೆಂಗಿ ಸೋಂಕಿಗೆ 11 ವರ್ಷದ ಬಾಲಕನೊಬ್ಬ ಸಾವನ್ನಪ್ಪಿದ್ದಾನೆ.
ಹೌದು ಅಂಜನಾಪುರದ 11 ವರ್ಷದ ಬಾಲಕ ಗಗನ್ ಸಾವನ್ನಪ್ಪಿದ್ದಾನೆ. ನಿನ್ನೆ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಗಗನ್ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಚೈತನ್ಯ ಟೆಕ್ನೋ ಶಾಲೆಯಲ್ಲಿ ಬಾಲಕ ಗಗನ್ ಓದುತ್ತಿದ್ದ ಚಲನೆಗಳಿಂದ ಗಗನ್ ಡೆಂಗಿ ಜ್ವರದಿಂದ ಬಳಲುತ್ತಿದ್ದ ಎನ್ನಲಾಗಿದೆ.
ಇನ್ನೂ ಮೃತ ಬಾಲಕನ ಪೋಷಕರು ಶಾಲೆಯಲ್ಲಿ ಸರಿಯಾದ ರೀತಿಯಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳುತ್ತಿಲ್ಲ. ಹೀಗಾಗಿ ರೋಗ ಹರಡುವ ಸಾಧ್ಯತೆ ಇದೆ ಹಾಗಾಗಿ ಶಾಲಾ ಆಡಳಿತ ಮಂಡಳಿಯ ವಿರುದ್ಧ ಇದೀಗ ಪೋಷಕರು ಆಕ್ರೋಶ ಹೊರಹಾಕಿದ್ದಾರೆ.