ಬೆಂಗಳೂರು: ಸ್ಯಾಂಡಲ್‍ವುಡ್ ನಟ ದರ್ಶನ್ & ಗ್ಯಾಂಗ್ ವಿರುದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪ ಕೇಳಿ ಬಂದಿದೆ. ಈ ನಡುವೆ ಕೊಲೆ ಕೇಸ್ ಸಂಬಂಧ ತನಿಖೆಯನ್ನ ಪೊಲೀಸರು ಮತ್ತಷ್ಟು ಚುರುಕುಗೊಳಿಸಿದ್ದು, ಹಲವು ಮಹತ್ವವಾದ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.
ಇವೆಲ್ಲದರ ನಡುವೆ ಜೂನ್ 8 ರಂದು ರೇಣುಕಾಸ್ವಾಮಿಯನ್ನ `ಡಿ’ ಗ್ಯಾಂಗ್‍ನವರು ಪಟ್ಟಣಗೆರೆ ಶೆಡ್‍ಗೆ ಕರೆತಂದು ಹಿಗ್ಗಾಮುಗ್ಗ ಥಳಿಸಿ ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಈ ನಡುವೆ ಮಧ್ಯಾಹ್ನ 12.30ರ ಸುಮಾರಿಗೆ ಬಂದಿದ್ದ ರೇಣುಕಾಸ್ವಾಮಿ ಹಲ್ಲೆ ಮಾಡಿದ್ದ ಗ್ಯಾಂಗ್ ದರ್ಶನ್ ಎಂಟ್ರಿಯಾಗೋದಕ್ಕೂ ಮುಂಚೆ ಊಟ ಮಾಡಿಸಿದ್ದರು ಎನ್ನಲಾಗಿದೆ. ಹೊಟ್ಟೆ ಒಳಗಿನ ಊಟದ ಜೀರ್ಣ ಕ್ರಿಯೆ ಬಗ್ಗೆ ಸ್ಪಷ್ಟನೆ ತೆಗೆದುಕೊಳ್ಳಲು ಪೊಲೀಸರು ತೀರ್ಮಾನ ಮಾಡಿದ್ದಾರೆ. ಫಾರೆನ್ಸಿಕ್ ತಜ್ಞರು ನೀಡಿರೋ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಸ್ವಲ್ಪ ಆಹಾರ ಇರುವುದನ್ನು ಕಂಡುಕೊಂಡಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಪೊಲೀಸರು ಇನ್ನೊಂದು ಹಂತದ ತನಿಖೆಯನ್ನು ನಡೆಸಲು ಮುಂದಾಗಿದ್ದಾರೆ.