ಬೆಂಗಳೂರು : ನಿನ್ನೆ ದೆಹಲಿಯಲ್ಲಿ ಸ್ಪೈಸ್ ಜೆಟ್ ವಿಮಾನದಲ್ಲಿ ತಾಂತ್ರಿಕ ದೋಷ ಎಂದು ಕಾರಣ ಹೇಳಿ, ಸುಮಾರು 10 ಗಂಟೆಗಳ ಕಾಲ ಪ್ರಯಾಣಿಕರನ್ನು ವಿಮಾನದಲ್ಲಿ ಕೂಡಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿಗೆ ಆಗಮಿಸಿದ ನಂತರ ಪ್ರಯಾಣಿಕರು ಸ್ಪೈಸ್ ಜೆಟ್ ಏರ್ಲೈನ್ಸ್ ವಿರುದ್ಧ ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ.
ಹೌದು ದೆಹಲಿಯಿಂದ ಬೆಂಗಳೂರಿಗೆ ಬಂದಿಳಿದ ಪ್ರಯಾಣಿಕರು ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಪ್ರಯಾಣಿಕರು ಆಕ್ರೋಶ ಹೊರ ಹಾಕುತ್ತಿದ್ದಾರೆ. ಊಟ ತಿಂಡಿ ಕೊಡದೆ ಅಮಾನವೀಯವಾಗಿ ನಡೆಸಿಕೊಂಡಿದ್ದಾರೆ.ಸೈನ್ಸ್ ಜಾಟ್ ನಲ್ಲಿ ಯಾರು ಪ್ರಯಾಣಿಸಬೇಡಿ ಎಂದು ಆಕ್ರೋಶ ಹೊರಹಾಕಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು ಆಕ್ರೋಶ ಹೊರ ಹಾಕಿದ್ದಾರೆ. ಸತತವಾಗಿ 10 ಗಂಟೆಗಳ ಕಾಲ ವಿಮಾನದಲ್ಲಿ ಕೂರಿಸಿದ್ದಾರೆ ವಿಮಾನದಲ್ಲಿ ವಯಸ್ಸಾದವರು ಮಹಿಳೆಯರು ಸೇರಿದಂತೆ ತುಂಬಾ ಕಷ್ಟ ಅನುಭವಿಸಿದ್ದಾರೆ. ಹಾಗಾಗಿ ಸ್ಪೈಸ್ ಜೆಡ್ ವಿಮಾನದಲ್ಲಿ ಯಾರು ಪ್ರಯಾಣಿಸಬೇಡಿ ಎಂದು ಕೆಂಪೇಗೌಡ ವಿಮಾನ ನಿಲ್ದಾಣದಿಂದ ಹೊರಗಡೆ ಬಂದ ನಂತರ ಆಕ್ರೋಶ ಹೊರಹಾಕಿದರು.