ಮಂಡ್ಯ : ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಲು ಸರ್ಕಾರ ಮುಂದಾಗಿದ್ದು ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಜಿಲ್ಲಾಪಂಚಾಯತಿ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ತುರ್ತು ಸಭೆ ನಡೆಸಿದ್ದು ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ಗೆ ತಾತ್ಕಾಲಿಕ ತಡೆ ನೀಡಿದ್ದಾರೆ.
ರೈತರು, ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ ಹಿನ್ನೆಲೆ ಮಂಡ್ಯದ ಜಿಲ್ಲಾಪಂಚಾಯತಿ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ತುರ್ತು ಸಭೆ ನಡೆಸಲಾಗಿದೆ. ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ಗೆ ತಾತ್ಕಾಲಿಕ ತಡೆ ನೀಡಲಾಗಿದೆ. ಇದು 2018 ರಿಂದ ಇದೆ. ಸಾಕಷ್ಟು ರೈತರು ಟ್ರಯಲ್ ಬ್ಲಾಸ್ಟ್ ಬೇಡ ಎಂದು ಹೇಳಿದ್ದಾರೆ. ಸರ್ಕಾರ ಹಾಗೂ ನಮಗೆ ಬೇರೆ ಯಾವ ವಿಶೇಷ ಕಾಳಜಿ ಇಲ್ಲ. ನಮಗೆ ಜಲಾಶಯದ ಸುರಕ್ಷತೆ ಮುಖ್ಯ ಎಂದರು.
ಜುಲೈ 15 ರ ಒಳಗೆ ಕೋರ್ಟಿಗೆ ಸಮಗ್ರ ಮಾಹಿತಿ ಕೊಡಲಿದ್ದೇವೆ. ಗೊಂದಲ ಬಗ್ಗೆ ಹರಿಯದಿದ್ರೆ ಸಮಯಾವಕಾಶ ಕೇಳಲಿದ್ದೇವೆ ಎಂದು ಮಂಡ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ಹೇಳಿಕೆ ನೀಡಿದರು. ಟ್ರಯಲ್ ಬ್ಲಾಸ್ಟ್ ಗೆ ಕೋರ್ಟ್ 4 ತಿಂಗಳ ಟೈಮ್ ನಿಗದಿ ಮಾಡಿದೆ. ಗಣಿಗಾರಿಕೆ ಕುರಿತು ಯಾವುದೇ ನಿರ್ಧಾರ ಮಾಡಿದರು, ಟ್ರಯಲ್ ಬ್ಲಾಸ್ಟ್ ನಡೆಸಿ ನಿರ್ಧರಿಸಲು ಕೋರ್ಟ್ ಸೂಚಿಸಿದೆ ಎಂದು ತಿಳಿಸಿದರು.
ಟ್ರಯಲ್ ಬ್ಲಾಸ್ಟ್ ಗೆ ದಿನಾಂಕ ನಿಗದಿ ಮಾಡಿಲ್ಲ. ಕೇವಲ ಕುಳಿಗಳನ್ನ ಮಾತ್ರ ಕೊರೆಸಲಾಗಿದೆ. ಸಿಎಂ ಜೊತೆ ಸಭೆ ಮಾಡಿ ತೀರ್ಮಾನ ಮಾಡುತ್ತೇವೆ. ವೈಯಕ್ತಿಕ ಗಣಿಗಾರಿಕೆ ನಮಗೆ ಮುಖ್ಯವಲ್ಲ. ಮತ್ತೊಂದು ಡ್ಯಾಮ್ ಕಟ್ಟಲು ಸಾಧ್ಯವಿಲ್ಲ ಎಂದು ಎಲ್ಲರಿಗೂ ಗೊತ್ತಿದೆ. ಜಲಾಶಯಕ್ಕೆ ಒಂದು ಸಣ್ಣ ಹಾನಿಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.