ಬೆಂಗಳೂರು: ರೇಷನ್ ಕಾರ್ಡ್ ಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ. ಆದ್ರೇ ಇನ್ನೂ ಕೆಲವರು ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಿಲ್ಲ. ಈ ಹಿನ್ನಲೆಯಲ್ಲಿ ಪಡಿತರ ಚೀಟಿದಾರರಿಗೆ ಸಿಹಿಸುದ್ದಿ ಎನ್ನುವಂತೆ ರಾಜ್ಯ ಸರ್ಕಾರವು ಮತ್ತೆ ಡೆಡ್ ಲೈನ್ ವಿಸ್ತರಣೆ ಮಾಡಿರುವುದಾಗಿ ತಿಳಿದು ಬಂದಿದೆ.
ಈ ಬಗ್ಗೆ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉನ್ನತ ಮೂಲಗಳಿಂದ ಮಾಹಿತಿ ತಿಳಿದು ಬಂದಿದ್ದು, ಸೆಪ್ಟೆಂಬರ್.30, 2024ರವರೆಗೆ ಪಡಿತರ ಚೀಟಿದಾರರು ತಮ್ಮ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡೋದಕ್ಕೆ ಗಡುವನ್ನು ವಿಸ್ತರಣೆ ಮಾಡಲಾಗಿದೆ ಎಂಬುದಾಗಿ ಹೇಳಲಾಗುತ್ತಿದೆ.
ಅಂದಹಾಗೇ ಜೂನ್.30, 2024ರವರೆಗೆ ರೇಷನ್ ಕಾರ್ಡ್ ಗೆ ಆಧಾರ್ ಸಂಖ್ಯೆ ಲಿಂಕ್ ಮಾಡೋದಕ್ಕೆ ಅವಕಾಶ ನೀಡಲಾಗಿತ್ತು. ಆದ್ರೇ ಅನೇಕ ಪಡಿತರ ಚೀಟಿದಾರರ ಕುಟುಂಬಸ್ಥರು ಆಧಾರ್ ಸಂಖ್ಯೆ ಲಿಂಕ್ ಮಾಡಿರಲಿಲ್ಲ. ಈ ಹಿನ್ನಲೆಯಲ್ಲಿ ಈಗ ರಾಜ್ಯ ಸರ್ಕಾರ ಮತ್ತೊಮ್ಮೆ ಸೆಪ್ಟೆಂಬರ್.30ರವರೆಗೆ ದಿನಾಂಕವನ್ನು ವಿಸ್ತರಣೆ ಮಾಡಿದೆ ಎಂದು ತಿಳಿದು ಬಂದಿದೆ.
BREAKING: ರಾಜ್ಯ ಸರ್ಕಾರದಿಂದ ‘ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ’ಗಳನ್ನು ನೇಮಿಸಿ ಆದೇಶ: ಇಲ್ಲಿದೆ ಪಟ್ಟಿ