ಬೆಂಗಳೂರು: ರಾಜ್ಯದಲ್ಲಿ ಮುಂಬರುವಂತ ನಾಲ್ಕು ಉಪ ಚುನಾವಣೆಗಳಿಗೆ ಕರ್ನಾಟಕ ಬಿಜೆಪಿ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ. ನಾಲ್ಕು ಒಂದು ಸ್ಥಳೀಯ ಸಂಸ್ಥೆ ಹಾಗೂ ಮೂರು ವಿಧಾನಸಭಾ ಉಪ ಚುನಾವಣೆಗಳಿಗೆ ಉಸ್ತುವಾರಿಗಳನ್ನು ನೇಮಿಸಿ ಆದೇಶಿಸಿದೆ.
ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣೆ, ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಉಸ್ತುವಾರಿಗಳನ್ನು ನೇಮಿಸಲಾಗಿದೆ ಅಂತ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಗೆ ಉಸ್ತುವಾರಿಗಳನ್ನಾಗಿ ಸಂಸದ ಬಸವರಾಜ ಬೊಮ್ಮಾಯಿ, ಕೋಟಾ ಶ್ರೀನಿವಾಸ ಪೂಜಾರಿ, ಕ್ಯಾ.ಬ್ರಿಜೇಶ್ ಚೌಟ ಹಾಗೂ ಪ್ರೀತಂ ಗೌಡ ನೇಮಕ ಮಾಡಿದ್ದಾರೆ.
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ವಿಪಕ್ಷ ನಾಯಕ ಆರ್.ಅಶೋಕ್, ಉಪ ನಾಯಕ ಅರವಿಂದ್ ಬೆಲ್ಲದ್, ಮಹೇಶ್ ಟೆಂಗಿನಕಾಯಿ, ಪಿ.ರಾಜೀವ್ ನೇಮಿಸಿದ್ರೇ, ಸಂಡೂರು ಕ್ಷೇತ್ರಕ್ಕೆ ಸಂಸದ ಗೋವಿಂದ ಕಾರಜೋಳ, ವಿ.ಸುನೀಲ್ ಕುಮಾರ್, ಎನ್ ರವಿಕುಮಾರ್, ಕೆಎಸ್ ನವೀನ್ ನೇಮಿಸಲಾಗಿದೆ.
ಚನ್ನಪಟ್ಟಣ ಕ್ಷೇತ್ರಕ್ಕೆ ಡಾ.ಸಿಎನ್ ಅಶ್ವತ್ಥನಾರಾಯಣ, ಎಂ ಕೃಷ್ಣಪ್ಪ, ಹೆಚ್ಎಸ್ ಗೋಪಿನಾಥ ರೆಡ್ಡಿ ಹಾಗೂ ನಂದೀಶ್ ರೆಡ್ಡಿ ಅವರನ್ನು ನೇಮಕ ಮಾಡಿ ಆದೇಶಿಸಿದ್ದಾರೆ.
ಅಸ್ಸಾಂ ಪ್ರವಾಹ ಪರಿಸ್ಥಿತಿ ಗಂಭೀರ, 30 ಜಿಲ್ಲೆಗಳಲ್ಲಿ 24.50 ಲಕ್ಷ ಜನರಿಗೆ ತೊಂದರೆ
ಬೆಂಗಳೂರಲ್ಲಿ ‘ಬಾಡಿಗೆ’ ಪಾವತಿಸದ ‘ಬ್ಯಾಂಕ್, ಪೋಸ್ಟ್ ಆಫೀಸ್’ಗೆ ಬೀಗ ಜಡಿದ ‘BBMP’ ಅಧಿಕಾರಿಗಳು