ಬಳ್ಳಾರಿ: ಗೃಹಲಕ್ಷ್ಮೀ ಯೋಜನೆ ಜೂನ್ ತಿಂಗಳ ಹಣವನ್ನು ಜಮಾ ಮಾಡಲಾಗಿದೆ. ಈಗ ಜುಲೈ ತಿಂಗಳ ಹಣ ಬಾಕಿ ಇದೆ. ಇದಲ್ಲದೇ ಕೆಲ ಯಜಮಾನಿ ಮಹಿಳೆಯರ ಖಾತೆಗೆ ಇನ್ನೂ ಬಾಕಿ ಹಣ ಜಮಾ ಆಗಬೇಕಿದೆ. ಅಂತಹವರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಿಗ್ ಅಪ್ ಡೇಟ್ ನೀಡಿದ್ದಾರೆ. ಆ ಬಗ್ಗೆ ಮುಂದೆ ಓದಿ.
ಬಳ್ಳಾರಿ ನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಹಿರಿಯ ನಾಗರಿಕರ ಹಾಗೂ ವಿಕಲಚೇತನರ ಸಬಲೀಕರಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ವಿವಿಧ ಪರಿಕರಗಳ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು.
ಯಜಮಾನಿಯರ ಖಾತೆಗೆ ಹಣ ಜಮೆ
ಬಳ್ಳಾರಿ ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆಗೆ ಒಟ್ಟು ಶೇ.98 ರಷ್ಟು ಮಹಿಳೆಯರು ನೋಂದಾಯಿಸಿಕೊಂಡಿದ್ದು, ಇಲ್ಲಿಯವರೆಗೆ ಎಲ್ಲಾ ತಿಂಗಳ ಹಣ ಜಮಾ ಆಗುತ್ತಿದೆ. ಜೂನ್ ತಿಂಗಳ ಹಣವು ವಾರದಲ್ಲಿಯೇ ತಮ್ಮ ಖಾತೆಗಳಿಗೆ ಜಮಾ ಆಗಲಿದೆ. ಪ್ರಸ್ತಕ ತಿಂಗಳಿನ ಹಣವು ಸಹ ಇಷ್ಟರಲ್ಲೇ ಪಾವತಿಯಾಗಲಿದ್ದು, ಎಲ್ಲಾ ಮಹಿಳೆಯರಿಗೂ ತಲುಪಲಿದೆ ಎಂದು ಸಚಿವರು ತಿಳಿಸಿದರು.
ಅಂಗನವಾಡಿ ಕಾರ್ಯಕರ್ತೆಯರ ಸೇವೆ ಅನನ್ಯ
ಸಮಾಜದಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಪಾತ್ರ ಮಹತ್ವದ್ದಾಗಿದೆ. ಯಶೋಧೆಯು ಶ್ರೀಕೃಷ್ಣನನ್ನು ಹೇಗೆ ಬೆಳೆಸುತ್ತಾಳೆಯೋ, ಅದರಂತೆ ಸಮಾಜದಲ್ಲಿನ ಮಕ್ಕಳನ್ನು ಅಂಗವಾಡಿ ಕಾರ್ಯಕರ್ತೆ, ಸಹಾಯಕಿಯರು ಬೆಳೆಸುತ್ತಿದ್ದು, ಸಮಾಜದ ಏಳಿಗೆಗೆ ಇವರ ಪಾತ್ರ ಮಹತ್ವದ್ದಾಗಿದೆ. ಒಂದು ಹೆಣ್ಣು ಮನೆ ಬೆಳಗುತ್ತಾಳೆ ಮತ್ತು ಸಮಾಜವನ್ನು ಬೆಳೆಸುತ್ತಾಳೆ. ಚುನಾವಣೆ, ಪಲ್ಸ್-ಪೊಲೀಯೋ, ಮನೆ ಸಮೀಕ್ಷೆ, ಮುಖ್ಯವಾಗಿ ಕೊರೊನಾ ಸಂದರ್ಭದಲ್ಲಿ ಅಂಗವಾಡಿ ಕಾರ್ಯಕರ್ತೆ, ಸಹಾಯಕಿಯರು ಗಣನೀಯ ಸೇವೆ ನೀಡಿದ್ದಾರೆ. ಸಮಾಜದಲ್ಲಿ ಅತ್ಯಂತ ಪ್ರಮುಖ ಸೇವೆ ನೀಡುವ ಇಲಾಖೆ ನಮ್ಮದು ಎಂದರೆ ತಪ್ಪಾಗಲಾರದು ಎಂದು ಹೇಳಿದರು.
Good News: ರಾಜ್ಯದ 7 ಸಾವಿರಕ್ಕೂ ಹೆಚ್ಚು ಅಂಗನವಾಡಿಗಳ ಉನ್ನತೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಅಸ್ಸಾಂ ಪ್ರವಾಹ ಪರಿಸ್ಥಿತಿ ಗಂಭೀರ, 30 ಜಿಲ್ಲೆಗಳಲ್ಲಿ 24.50 ಲಕ್ಷ ಜನರಿಗೆ ತೊಂದರೆ