ವಿಜಯಪುರ : ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕೃಷ್ಣಾನಗರದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟಗೊಂಡಿರುವ ಘಟನೆ ನಡೆದಿದೆ.
ಕೃಷ್ಣಾನಗರದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟಗೊಂಡ ಪರಿಣಾಮ ಹೊತ್ತಿ ಉರಿದಿದೆ. ಈ ವೆಳೆ ಅಲ್ಲೇ ಕೆಲಸ ಮಾಡುತ್ತಿದ್ದ ಕಾರ್ಮಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಳಪೆ ಬಾಯ್ಲರ್ ನಿರ್ಮಾಣದಿಂದ ಸ್ಪೋಟ ಸಂಭವಿಸಿದೆ ಎಂದು ರೈತರು ಆರೋಪಿಸಿದ್ದರು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.