ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಸಿಎಂ ಬದ್ಲಾವಣೆ ಡಿಎನ್ ಹುದ್ದೆಗಳ ಕುರಿತು ಚರ್ಚೆ ನಡೆಯುತ್ತಿದ್ದು, ಇದರ ಮಧ್ಯ ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ನಡೆದಿದೆ ವಿಚಾರ ಕೂಡ ಭಾರಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ಪತ್ನಿ ಅವರ ಹೆಸರಲ್ಲಿ ಜಮೀನು ಹಂಚಿಕೆಯಾಗಿದೆ ಎಂಬ ಆರೋಪ ಕೇಳಿ ಬಂದಿದ್ದು ಈ ಕುರಿತಾಗಿ ಇದೀಗ ಬಿಜೆಪಿಯ ಎಸ್ ಟಿ ಸೋಮಶೇಖರ್ ಸ್ಫೋಟಕ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.
ಮುಡಾದ ಪ್ರತಿ ಮೀಟಿಂಗ್ ನಲ್ಲಿ ಶಾಸಕರ ಫೈಲ್ ಗಳೇ ಇರುತ್ತಿದ್ದವು. ಆದ್ರೆ, ಶಾಸಕರ ಹೆಸರಿನ ಫೈಲ್ ಗಳು ಚರ್ಚೆಯಾಗದೆ ಪಾಸ್ ಆಗುತ್ತಿದ್ದವು. ಮುಡಾ ಸಭೆಯ ಬಹುತೇಕ ಸಬ್ಜೆಕ್ಟ್ ಗಳು ಶಾಸಕರಿಗಳಿಗೆ ಸೇರಿದ್ದವು. ಇಲ್ಲಿ ಮುಡಾ ಸದಸ್ಯರಾಗಲು ಬೇರೆ ಜಿಲ್ಲೆಯ ಪರಿಷತ್ ಸದಸ್ಯರು ವಾಸ ಸ್ಥಳವನ್ನ ಮೈಸೂರಿಗೆ ಕೊಡುತ್ತಿದ್ದರು ಎಂದು ಆರೋಪಿಸಿದ್ದಾರೆ.
ನಾನು ಉಸ್ತುವಾರಿ ಸಚಿವರಾಗಿದ್ದಾಗ ಈ ಅವ್ಯವಹಾರ ವಿಚಾರ ನನ್ನ ಗಮನಕ್ಕೆ ಬಂದಿತ್ತು. ಆಯುಕ್ತರು ಸಭೆ ಮಾಡದೆ ಸೈಟ್ ಗಳನ್ನ ನೀಡಿದ್ದಾರೆ. ಈ ಮಟ್ಟಕ್ಕೆ ಇಲ್ಲಿಯ ಶಾಸಕರಗಳು ಲಾಭಿ ಮಾಡುತ್ತಾರೆ. ಮುಡಾ ಇರುವುದು ಜನ ಸಾಮಾನ್ಯರ ಅಭಿವೃದ್ಧಿಗೋಸ್ಕರ ಆದರೆ ಇಲ್ಲಿ ಆಗುತ್ತಿರುವುದು ಏನು ? ಈ ಬೋರ್ಡ್ ವ್ಯವಸ್ಥೆ ಬದಲಾಗಬೇಕು ಎಂದು ಆಗ್ರಹಿಸಿದ್ದಾರೆ
50:50 ಅನುಪಾತದಡಿ ನಿವೇಶನ ಕೊಡುವಾಗ ಸಭೆಗೆ ಚರ್ಚೆಗೆ ತಂದು ಕೊಡಬೇಕು. ಇದ್ಯಾವಾ ರೂಲ್ಸ್ ಗಳನ್ನು ಅಂದಿನ ಆಯುಕ್ತರು ಫಾಲೋ ಮಾಡಲಿಲ್ಲ. ಹೀಗಾಗಿ ಅಂದಿನ ಆಯುಕ್ತರನ್ನು ಬದಲಾಯಿಸುವಂತೆ ಸರ್ಕಾರಕ್ಕೆ ಹೇಳಿದ್ದೆ. ಆದರೆ ಜಾತಿಯ ಪ್ರಭಾವದಿಂದ ಅವರ ಉಳಿಯುವ ರೀತಿ ಆಯಿತು. ಅವತ್ತೇ ಸರಿಯಾದ ಕ್ರಮ ಆಗಿದ್ದರೇ ಇವತ್ತು ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆಯುತ್ತಿರಲಿವೇನೋ. ಈಗಲಾದರೂ ಈ ಬಗ್ಗೆ ತನಿಖೆಯಾಗಿ ವ್ಯವಸ್ಥೆ ಬದಲಾಗಲಿ ಎಂದು ಹೇಳಿದರು.