ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಗೆಲುವು ಸಾಧಿಸಿ ಸಂಸದರಾಗಿ ಆಯ್ಕೆಯಾದ ಡಾಕ್ಟರ್ ಕೆ ಸುಧಾಕರ್ ಅವರಿಗೆ ಇಂದು ಬೆಂಗಳೂರಿನ ನೆಲಮಂಗಲದಲ್ಲಿ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಅದರಂತೆ ಕಾರ್ಯಕ್ರಮಕ್ಕೆ ಬಂದವರಿಗೆ ಭರ್ಜರಿ ಬಾಡೂಟ ಜೊತೆಗೆ ಎಣ್ಣೆಯನ್ನು ಕೂಡ ಆಯೋಜಿಸಲಾಗಿತ್ತು. ಇನ್ನು ಉಚಿತ ಎಣ್ಣೆಗಾಗಿ ಮುಗಿಬಿದ್ದ ಜನರನ್ನು ನಿಯಂತ್ರಣ ಮಾಡಲು ಪೊಲೀಸರು ಹರಸಾಹಸ ಪಡುವಂತಾಯಿತು. ಬಾಡೂಟದ ಜೊತೆಗೆ ಉಚಿತವಾಗಿ ಎಣ್ಣೆ ಹಂಚುತ್ತಿದ್ದನ್ನು ನೋಡಿ ಯುವಕರು ವೃದ್ಧರು ಎನ್ನದೆ ಎಣ್ಣೆಗಾಗಿ ಮುಗಿಬಿದ್ದಿರುವ ದೃಶ್ಯ ಕಂಡು ಬಂದಿತು.
ಈ ಕಾರ್ಯಕ್ರಮದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್, ನೆಲಮಂಗಲ ಮಾಜಿ ಶಾಸಕರಾದ ನಾಗರಾಜು, ಮಾಜಿ ಎಂಎಲ್ಸಿ ಇ.ಕೃಷ್ಣಪ್ಪ ಸೇರಿದಂತೆ ಮೈತ್ರಿ ಪಕ್ಷದ ಹಿರಿಯ ಮುಖಂಡರು, ಮಾಜಿ ಶಾಸಕರು ಭಾಗಿಯಾಗಿದ್ದರು.