ಶಿವಮೊಗ್ಗ : ಕಾಣೆಯಾಗಿದ್ದ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಶವ ಪತ್ತೆಯಾಗಿದೆ. ಜೂನ್ 30ರಂದು ಕಾಣೆಯಾಗಿದ್ದ ಆಗುಂಬೆಯ ಕುಶಾಲ್ ಎಂಬುವರ ಪುತ್ರಿ ಪೂಜಾ (24) ಮೃತದೇಹ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆಯ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ.
ಕುಶಾಲ್ ಎಂಬುವವರ ಮಗಳಾದ ಪೂಜಾ(24) ಜೂನ್ 30 ರಂದು ಮನೆಯಿಂದ ಹೊರಹೋದಾಕೆ ನಿಗೂಢವಾಗಿ ನಾಪತ್ತೆಯಾಗಿದ್ದಳು. ಯುವತಿ ನಾಪತ್ತೆಯಾಗಿರುವ ಬಗ್ಗೆ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆಗುಂಬೆ ಪೊಲೀಸ್ ಠಾಣೆಯ ಪಿಎಸ್ಐ ರಂಗನಾಥ್ ಅಂತರಗಟ್ಟಿ ನೇತೃತ್ವದಲ್ಲಿ ತಂಡ ರಚನೆ ಮಾಡಿ ಕಾರ್ಯಾಚರಣೆ ನಡೆಸಿದ್ದ ಪೊಲೀಸರು. ಹೊಂಡಾದಲ್ಲಿ ಕೊಳೆತ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿತ್ತು.
ಹಲವು ವರ್ಷಗಳಿಂದ ಸ್ನೇಹಿತನಾಗಿದ್ದ ಮಣಿಕಂಠ ಎನ್ನುವಾತನನ್ನು ಪೊಲೀಸರು ತಮ್ಮದೇ ಸ್ಟೈಲ್‌ನಲ್ಲಿ ವಿಚಾರಣೆ ನಡೆಸಿದ್ದಾರೆ. ಆ ವೇಳೆ ಪೂಜಾಳನ್ನು ಕೊಂದಿದ್ದಾಗಿ ಮಣಿಕಂಠ ಒಪ್ಪಿಕೊಂಡಿದ್ದಾನೆ. ಹಣಕಾಸಿ ವಿಚಾರಕ್ಕೆ ಜಗಳ ನಡೆದು ಕೊಲೆ ಮಾಡಿ ಬಳಿಕ ಆಗುಂಬೆ ಅರಣ್ಯ ಪ್ರದೇಶದಲ್ಲಿ ಬಿಸಾಡಿ ಹೋಗಿದ್ದಾನೆ ಎನ್ನುವ ಅಂಶ ತಿಳಿದುಬಂದಿದೆ. ಸದ್ಯ ಆಗುಂಬೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.