ಬೆಂಗಳೂರು:ಇತ್ತೀಚಿಗೆ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದ್ದ ಆರೋಪದಲ್ಲಿ ಭವಾನಿ ರೇವಣ್ಣಗೆ ಕರ್ನಾಟಕ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.ಇದೀಗ ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ ಎಂದು ತಿಳಿದುಬಂದಿದೆ.
ನಿರೀಕ್ಷಣಾ ಜಾಮೀನು ಕೋರಿ ಭವಾನಿ ಸಲ್ಲಿಸಿದ್ದ ಮನವಿಯನ್ನು ಜೂನ್ 18ರಂದು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಪೀಠ ಪುರಸ್ಕರಿಸಿತ್ತು. ಈ ಆದೇಶವನ್ನು ಕರ್ನಾಟಕ ಸರ್ಕಾರವು ಪ್ರಶ್ನಿಸಿದ್ದು, ವಿಚಾರಣೆಯನ್ನು ಬುಧವಾರ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ನೇತೃತ್ವದ ವಿಭಾಗೀಯ ಪೀಠ ನಡೆಸಲಿದೆ.
ಸಂತ್ರಸ್ತೆಗೆ ಆಹಾರ ನೀಡಿಲ್ಲ ಮತ್ತು ಉಡುಪು ಬದಲಿಸಲು ಭವಾನಿ ಅವಕಾಶ ನೀಡಿಲ್ಲ ಎಂದು ಪ್ರಾಸಿಕ್ಯೂಷನ್ ವಾದಿಸಿತ್ತು. ಸಂತ್ರಸ್ತೆಯ ಸಿಆರ್‌ಪಿಸಿ ಸೆಕ್ಷನ್ 164 ಹೇಳಿಕೆ ಓದಿದಾಗ ಬಟ್ಟೆ ಮತ್ತು ಊಟವನ್ನು ಭವಾನಿ ಕಳುಹಿಸಿದ್ದರು ಎಂದು ಹೇಳಿದ್ದಾರೆ. ಭವಾನಿ ರೇವಣ್ಣ ಸೇರಿ ಹಲವರ ವಿರುದ್ದ ಐಪಿಸಿ ಸೆಕ್ಷನ್‌ಗಳಾದ 364ಎ, 365 ಮತ್ತು 34 ಅಡಿ ಪ್ರಕರಣ ದಾಖಲಾಗಿದೆ.
ಇದೀಗ ಭವಾನಿ ರೇವಣ್ಣಗೆ ಮತ್ತೆ ಸಂಕಷ್ಟ ಎದುರಾಗಿದ್ದು ಕರ್ನಾಟಕ ಹೈಕೋರ್ಟ್ ನೀಡಿರುವ ನಿರೀಕ್ಷಣ ಜಾಮೀನು, ಆದೇಶವನ್ನು ಪ್ರಶ್ನಿಸಿ ಇದೀಗ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿದೆ. ಹಾಗಾಗಿ ಸದ್ಯಕ್ಕೆ ದೊಡ್ಡ ಗೌಡರ ಕುಟುಂಬಕ್ಕೆ ಸಂಕಷ್ಟಗಳ ಮೇಲೆ ಸಂಕಷ್ಟ ಎದುರಾಗುತ್ತಿವೆ.