ಒಡಿಶಾ : ದೇಶದ ಅತ್ಯಂತ ಸುಪ್ರಸಿದ್ಧ ದೇವಸ್ಥಾನವಾದ ಒಡಿಶಾದ ಪುರಿ ನಗರದಲ್ಲಿರುವ ಐತಿಹಾಸಿಕ ಜಗನ್ನಾಥ ದೇವಸ್ಥಾನದಲ್ಲಿ ಇಂದು ಘೋರ ದುರಂತ ಒಂದು ಸಂಭವಿಸಿದ್ದು, ಬಲಭದ್ರ ಜೀ ತನ್ನ ರಥವನ್ನು ಎಳೆಯುತ್ತಿದ್ದಾಗ ಇದ್ದಕ್ಕಿದ್ದಂತೆ ಕಾಲ್ತುಳಿತ ಸಂಭವಿಸಿತು. ಈ ವೇಳೆ 400ಕ್ಕೂ ಹೆಚ್ಚು ಭಕ್ತರು ಕೆಳಗೆ ಬಿದ್ದಿದ್ದರು. ಘಟನೆಯಲ್ಲಿ ಓರ್ವ ಭಕ್ತ ಸಾವನ್ನಪ್ಪಿದ್ದಾನೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, 50ಕ್ಕೂ ಹೆಚ್ಚು ಭಕ್ತರನ್ನು ಚಿಕಿತ್ಸೆ ನಂತರ ಬಿಡುಗಡೆ ಮಾಡಲಾಗಿದೆ.
ಕಳೆದ ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಬೋಲೆ ಬಾಬಾ ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತಕ್ಕೆ 120ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿರುವ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಇದೀಗ ಒಡಿಶಾದ ಪೂರಿ ಜಗನ್ನಾಥ ರಥಯಾತ್ರೆಯ ವೇಳೆ ಕಾಲ್ತುಳಿತದಿಂದ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಇದೀಗ ಘಟನಾ ಸ್ಥಳದಲ್ಲಿ ಅಗ್ನಿಶಾಮಕದಳ ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿಗಳು ಇದ್ದು, ಗಂಭೀರವಾಗಿ ಗಾಯಗೊಂಡವರನ್ನು ಆಂಬುಲೆನ್ಸ್ ಮೂಲಕ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಇನ್ನೂ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ