ಬೆಂಗಳೂರು : ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದಂತಹ ಲಾರಿ ಒಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಅಪರಿಚಿತ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ದಾಸನಪುರ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ.
ಹೌದು ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದರೆ. ದಾಸನಪುರ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪರಿಚಿತ ಮಹಿಳೆ ಸಾವನ್ನಪ್ಪಿದ್ದಾರೆ.ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಬಳಿ ಈ ಒಂದು ಅಪಘಾತ ಸಂಭವಿಸಿದೆ.ಅಪಘಾತದ ನಂತರ ಚಾಲಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಡುಗ ಹುಡುಗಿಯರಿಗೆ ಸರ್ವಿಸ್ ಬೇಕಾ ಎಂದವನು ಅಂದರ್
ಹುಡುಗ ಹಾಗೂ ಹುಡುಗಿಯರ ಸರ್ವಿಸ್ ಬೇಕಾ ಎಂದು ಮೆಸೇಜ್ ಕಳುಹಿಸಿದ್ದ ಆರೋಪಿಯನ್ನ ಇದೀಗ ಬೆಂಗಳೂರಿನ ಪೂರ್ವ ವಿಭಾಗದ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶೇಷಾದ್ರಿಪುರಂನ ವಿ ಸ್ಟೇಜ್ ಪಿಜಿ ಬಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.ಆರೋಪಿಯು ಹಲವು ಮೊಬೈಲ್ ನಂಬರ್ ಬಳಸಿ ಕರೆ ಹಾಗೂ ಮೆಸೇಜ್ ಮಾಡುತ್ತಿದ್ದ ಎನ್ನಲಾಗುತ್ತಿದೆ. ಈ ಕುರಿತಂತೆ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು. ಮಹಿಳೆಯರು ನೀಡಿದ ದೂರಿನ ಮೇರೆಗೆ ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.