ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಭೀಕರ ಹತ್ಯೆ ನಡೆದಿದ್ದು, ಹಳೇ ದ್ವೇಷದ ಹಿನ್ನೆಲೆಯಲ್ಲಿ ಗ್ರಾಮಪಂಚಾಯಿತಿ ಸದಸ್ಯನ ಬರ್ಬರವಾಗಿ ಕೊಲೆ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಬೈಲನರಸಾಪುರ ಗ್ರಾಮದಲ್ಲಿ ಗ್ರಾಮಪಂಚಾಯಿತಿ ಸದಸ್ಯರೊಬ್ಬರನ್ನು ದುಷ್ಕರ್ಮಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.
ಬೈಲನರಸಾಪುರ ಗ್ರಾಮಪಂಚಾಯಿತಿ ಸದಸ್ಯ ಅಪಾಕ್ ಅಮೀರ್ ಖಾನ್ (45) ನನ್ನು ಅದೇ ಗ್ರಾಮದ ಮೆಹಬೂಬ್ ಎಂಬಾತ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.








