ಬೆಂಗಳೂರು : ಬೀದಿನಾಯಿಗಳ ದಾಳಿ ನಡೆಸಿದ ಪರಿಣಾಮ ನಾಲ್ಕು ವರ್ಷದ ಬಾಲಕನೊಬ್ಬ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆಯಲ್ಲಿ ನಡೆದಿದೆ.
ಸೂಲಿಬೆಲೆಯಲ್ಲಿ ಬೀದಿನಾಯಿಗಳ ದಾಳಿಗೆ ನಾಲ್ಕು ವರ್ಷದ ಬಾಲಕ ಅವಾಜ್ ಬಾಷಾ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಕ್ಕಳ ಜೊತೆಗೆ ಅವಾಜ್ ಬಾಷಾ ಅಂಗಡಿಗೆ ಹೋಗುತ್ತಿದ್ದ ವೇಳೆ ಬೀದಿ ನಾಯಿಗಳು ಏಕಾಏಕಿ ದಾಳಿ ನಡೆಸಿದ ಪರಿಣಾಮ ಅವಾಜ್ ಬಾಷಾ ಮುಖಕ್ಕೆ ಗಾಯವಾಗಿದೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಬೀದಿನಾಯಿಗಳ ಹಾವಳಿ ತಡೆಗಟ್ಟುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.