ಬೆಂಗಳೂರು : ಲೋಕಸಭಾ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಪ್ರಮುಖ 5 ಗ್ಯಾರಂಟಿ ಯೋಜನೆಗಳ ರದ್ದು ಮಾಡಲಾಗುತ್ತದೆ ಎಂಬ ಚರ್ಚೆಯ ಬೆನ್ನಲ್ಲೇ ಇದೀಗ ಗ್ಯಾರಂಟಿ ಯೋಜನೆಗಳ ಬಗ್ಗೆ ಜಾಗೃತಿಗೆ ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಇಂದು ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾಪಂಚಾಯತ್ ಸಿಇಓಗಳ ಸಭೆಯಲ್ಲಿ ಸೂಚನೆ ನೀಡಿದ ಅವರು, ಗ್ಯಾರಂಟಿ ಯೋಜನೆಗಳ ಬಗ್ಗೆ ಜಾಗೃತಿಗೆ ಸಮೀಕ್ಷೆ ನಡೆಸಬೇಕಾಗಿದೆ. ಸುಮಾರು 5 ಕೋಟಿ ಜನರಿಂದ ಅಭಿಪ್ರಾಯ ಸಂಗ್ರಹಕ್ಕೆ ಕ್ರಮ ಕೈಗೊಳ್ಳಬೇಕಾಗಿದೆ. ಗ್ಯಾರಂಟಿ ಯೋಜನೆಗಳ ಕುರಿತು ಜಾಗೃತಿ ಮೂಡಿಸಲು ಹಾಗೂ ಫಲಾನುಭವಿಗಳಿಂದ ಪ್ರತಿಕ್ರಿಯೆ ಪಡೆಯಲು ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಬೇಕು ಎಂದು ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಜಾಗೃತಿ ಮೂಡಿಸಲು ಹಾಗೂ ಫಲಾನುಭವಿಗಳಿಂದ ಪ್ರತಿಕ್ರಿಯೆ ಪಡೆಯಲು ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಬೇಕು. ರಾಜ್ಯದಲ್ಲಿ 8452317 ಕುಟುಂಬಗಳ ಸುಮಾರು 5 ಕೋಟಿ ಜನರ ಸಮೀಕ್ಷೆ ನಡೆಸಬೇಕಾಗಿದೆ ಎಂದು ಸೂಚನೆ ನೀಡಿದರು.