ಬೆಂಗಳೂರು : ಅನರ್ಹ ಬಿಪಿಎಲ್ ಕಾರ್ಡ್ ಹೊಂದಿದ್ದವರಿಗೆ ಬಿಗ್ ಶಾಕ್ ಎದುರಾಗಿದ್ದು, ರಾಜ್ಯದಲ್ಲಿ ಯಾರೆಲ್ಲಾ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ಪಡೆದುಕೊಂಡಿದ್ದರೆ ಅಂತಹ ಕಾರ್ಡ್ ಗಳನ್ನು ಪತ್ತೆ ಹಚ್ಚಿ ಅವುಗಳನ್ನು ರದ್ದು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಇದೀಗ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಹೌದು ಇಂದು ವಿಧಾನಸೌಧದಲ್ಲಿ ನಡೆದ ಜಿಲ್ಲಾಧಿಕಾರಿ ಹಾಗೂ ಸಿಇಓಗಳ ಜೊತೆಗಿನ ಸಭೆಯಲ್ಲಿ ಈ ವಿಚಾರವಾಗಿ ಮಹತ್ವದ ಸೂಚನೆಗಳನ್ನು ಅವರು ನೀಡಿದರು.ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ನೀಡಿದ್ದೇವೆ. ಅನರ್ಹ ಬಿ.ಪಿ.ಎಲ್. ಕಾರ್ಡುಗಳನ್ನು ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್ ಕಾರ್ಡು ಒದಗಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಈ ವೇಳೆ ಅಧಿಕಾರಿಗಳಿಗೆ ಸೂಚಿಸಿದರು.
ಅಲ್ಲದೆ ರಾಜ್ಯದಲ್ಲಿ ಶೇ. 80 ರಷ್ಟು ಬಿಪಿಎಲ್ ಕಾರ್ಡುಗಳನ್ನು ಹೊಂದಿದ್ದಾರೆ. ತಮಿಳುನಾಡಿನಲ್ಲಿ ಶೇ.40 ರಷ್ಟಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇ.5.67 ಇರಬೇಕು ಎಂದು ವಿವರಿಸಿದರು. ಹಾಗಾಗಿ ಅನರ್ಹ ಡಿಪಿಎಲ್ ಕಾರ್ಡುಗಳನ್ನು ಪತ್ತೆ ಹಚ್ಚಿ ಕೂಡಲೇ ಅವುಗಳನ್ನು ರದ್ದುಪಡಿಸುವಂತೆ ಸಂಸಿದ್ದರಾಮಯ್ಯ ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.