ದಾವಣಗೆರೆ : ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದ ಸಮೀಪ ಬಿ.ಸಿ. ಪಾಟೀಲ್ ಅವರ ದೊಡ್ಡ ಮಗಳ ಗಂಡ ಪ್ರತಾಪ್ ಕುಮಾರ್ (41) ಕಾರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರಿನಲ್ಲಿ ಹೋಗಿದ್ದ ಪ್ರತಾಪ್ ಕುಮಾರ್ ವಿಷ ಸೇವಿಸಿದ್ದಾರೆ. ಅಸಲಿಗೆ ಆತ್ಮಹತ್ಯೆಗೆ ಕಾರಣವೇನು ಎನ್ನುವುದು ಇಲ್ಲಿದೆ ಸಂಪೂರ್ಣ ವಿವರ.
ಮಕ್ಕಳಾಗದಿದ್ದಕ್ಕೆ ಕುಗ್ಗಿ ಮಾನಸಿಕವಾಗಿ ಹೋಗಿದ್ದರು
ಬಿ.ಸಿ.ಪಾಟೀಲ್ ಅವರ ದೊಡ್ಡ ಮಗಳು ಸೌಮ್ಯ ಪಾಟೀಲ್ ಪತಿಯಾಗಿದ್ದಾರೆ. ಹೊನ್ನಾಳಿ ತಾಲೂಕಿನ ಅರಕೆರೆ ಸಮೀಪದ ಫಾರೆಸ್ಟ್ನಲ್ಲಿ ಈ ಘಟನೆ ನಡೆದಿದೆ. ಕಾರಿನಲ್ಲಿ ವಿಷ ಸೇವಿಸಿ ಪ್ರತಾಪ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಕ್ಷಣ ಪ್ರತಾಪ್ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದಾರೆ.ಆದರೆ ಚಿಕಿತ್ಸೆ ಫಲಕಾರಿಯಾಗದೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಪ್ರತಾಪ್ ಮೃತಪಟ್ಟಿದ್ದಾರೆ.
ಇನ್ನು ಅಳಿಯನ ಆತ್ಮಹತ್ಯೆ ಬಗ್ಗೆ ಬಿ.ಸಿ. ಪಾಟೀಲ್ ಪ್ರತಿಕ್ರಿಯಿಸಿದ್ದು, ಮಗಳ ಜೊತೆ 2008 ರಲ್ಲಿ ಮದುವೆ ಆಗಿತ್ತು. ಮಕ್ಕಳ ಆಗಿಲ್ಲ ಎನ್ನುವ ವಿಚಾರದಲ್ಲಿ ಕೊರಗಿತ್ತು. ಡಿ ಅಡಿಕ್ಷನ್ ಸೆಂಟರ್ನಲ್ಲಿ ಎರಡು ತಿಂಗಳು ಇದ್ದರು. ಆಗ ಸರಿ ಹೋಗಿದ್ದರು ಎಂದರು.ಮಾವ ಬಿಸಿ ಪಾಟೀಲ್ ಹೇಳುವಂತೆ ಮಕ್ಕಳಾಗಿಲ್ಲ ಎನ್ನುವ ಕೊರಗಿನಲ್ಲಿದ್ದರಂತೆ. ಹೀಗಾಗಿ ಪ್ರತಾಪ್ ಮಕ್ಕಳು ಆಗಿಲ್ಲ ಎಂದು ಮನನೊಂದು ಆತ್ಮಹತ್ಯೆಗೆ ಶರಣಾದ್ರಾ ಎನ್ನುವ ಶಂಕೆ ವ್ಯಕ್ತವಾಗಿದೆ.
ಇವತ್ತು ಬೆಳಗ್ಗೆ ಊರಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋಗಿದ್ದ. ಆದ್ರೆ, ಸಾಯುತ್ತಿದ್ದೇನೆ ಎಂದು ಕುಟುಂಬಸ್ಥರಿಗೆ ಕಾಲ್ ಮಾಡಿ ಹೇಳಿದ್ದ. ಈ ವಿಚಾರವನ್ನು ಪ್ರತಾಪ್ ಅವರ ಅಣ್ಣ ಕಾಲ್ ಮಾಡಿ ಮಾಹಿತಿ ನೀಡಿದ್ದ. ಮದುವೆ ಆಗಿ 16 ವರ್ಷ ಆಗಿತ್ತು. ರಾಜಕೀಯ ಸೇರಿ ನಮ್ಮ ವ್ಯವಹಾರಗಳನ್ನೆಲ್ಲ ಅವರೆ ನೋಡಿಕೊಳ್ಳುತ್ತಿದ್ದರು. ಬೆಳಗ್ಗೆ ಜೊತೆಯಲ್ಲಿ ತಿಂಡಿ ಮಾಡಿದ್ದೆವು. ನಾನು ನಮ್ಮ ಭಾಗದ ಕೆರೆಗಳಿಗೆ ಹೋಗಿ ಭೇಟಿ ನೀಡಿ ಬರುವಾಗ ವಿಷಯ ಗೊತ್ತಾಯ್ತು. ನಾಳೆ (ಜುಲೈ 09) ಚನ್ನಗಿರಿಯ ಕತ್ತಲಗೆರೆ ಗ್ರಾಮದಲ್ಲಿ ಅಂತ್ಯಸಂಸ್ಕಾರ ಮಾಡುತ್ತೇವೆ ಎಂದು ತಿಳಿಸಿದರು.