ಬೆಂಗಳೂರು : ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ಡಿ.ಕೆ. ಶಿವಕುಮಾರ್ ನೇತೃತ್ವದ ೧೨ ಶಾಸಕರ ನಿಯೋಗ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದೆ.
ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ ಹಾಗೂ ಹಾರೋಹಳ್ಳಿ ತಾಲ್ಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ಹಾಗೂ ರಾಮನಗರವನ್ನು ಇದರ ಜಿಲ್ಲಾ ಕೇಂದ್ರವಾಗಿ ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಹಲವು ಕಾಂಗ್ರೆಸ್ ಶಾಸಕರು ಮನವಿ ಮಾಡಿದ್ದಾರೆ.
1986ರ ಸಾಲಿನಲ್ಲಿ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ಚನ್ನಪಟ್ಟಣ, ರಾಮನಗರ, ಮಾಗಡಿ ಹಾಗೂ ಕನಕಪುರ ತಾಲ್ಲೂಕುಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನಾಗಿ ಘೋಷಿಸಲಾಗಿತ್ತು.